ಕುಶಾಲನಗರ: ನಿಂತಿದ್ದ ಕಾರಿನಲ್ಲಿ ವೈದ್ಯ ಶವವಾಗಿ ಪತ್ತೆ

ಮಡಿಕೇರಿ : ವೈದ್ಯರೊಬ್ಬರ ಶವ ಕುಶಾಲನಗರದ ಆನೆಕಾಡಿನ ಕಾರಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಡಾ. ಸತೀಶ (47) ಮೃತಪಟ್ಟ ವೈದ್ಯರು ಎಂದು ಗುರುತಿಸಲಾಗಿದೆ. ಇವರ ಹೆಸರು ರಾಜ್ಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಭ್ರೂಣ ಹತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯವೂ ವ್ಯಕ್ತವಾಗಿದೆ.
ಮೈಸೂರಿನ ಹುಣಸೂರು ತಾಲೂಕಿನ ಕೊಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಡಾ. ಸತೀಶ ಅವರು ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಹಲವು ವರ್ಷಗಳಿಂದ ಶಿವಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement