ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಭ್ರೂಣ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಈ ಸೂಚನೆ ನೀಡಿದ್ದಾರೆ.
ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಪತ್ತೆಯಾದ ನಂತರ ಅದರ ಒಂದೊಂದೇ ಕರಾಳ ಮುಖಗಳು ಬಯಲಿಗೆ ಬರುತ್ತಿವೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರಿಂದ ಭ್ರೂಣ ಹತ್ಯೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಒಟ್ಟು ಇಬ್ಬರು ವೈದ್ಯರು ಸೇರಿದಂತೆ 9 ಜನರನ್ನು ಈವರೆಗೆ ಬಂಧಿಸಲಾಗಿದೆ.
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಲಾಖೆ ತನಿಖೆ ಬಾಕಿ ಇರಿಸಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ
ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 9೦೦ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದ್ದು, ಹೀಗಾಗಿ ಇದನ್ನು ಇನ್ನಷ್ಟು ಆಳವಾಗಿ ತನಿಖೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement