ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7 ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲೆಯಲ್ಲಿ ವಾಯಭಾರ ಕುಸಿತ ಉಂಟಾಗಿದ್ದರಿಂದ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ಎಚ್ಚರಿಕೆ ನೀಡಿದೆ
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗೂ
ಡಿಸೆಂಬರ್​ 3, 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ

ಅಲ್ಲದೆ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಸೂಚನೆ ನೀಡಿದೆ.
ಡಿಸೆಂಬರ್‌ 3ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,  ಹಾಗೂ ದಕ್ಷಿಣ  ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement