ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಸಾವು

ಚಿಕ್ಕಮಗಳೂರು: ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಮೃತಪಟ್ಟ ಘಟನೆ ಡಿಸೆಂಬರ್‌ 2ರ ರಾತ್ರಿ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯತ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಅಲ್ಲಿಂದ ಸ್ಥಳಾಂತರ ಮಾಡುವಂತೆ ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾಡಾನೆಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು.
ಮಂಗಳವಾರ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

ಆನೆಗೆ ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲೇ ಕಾಡಾನೆ ಮೃತಪಟ್ಟಿರುವುದು ಕಂಡುಬಂದಿದೆ.
ಶನಿವಾರ ರಾತ್ರಿ ಸುಮಾರು 11:30 ರ ವೇಳೆಗೆ ಈ ಘಟನೆ ನಡೆದಿದ್ದು, ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪವೇ ಕಾಡಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಮೃತಪಟ್ಟ ಆನೆ ಒಂಟಿ ದಂತದ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ. ಆನೆ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ಇಲ್ಲ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement