ನವದೆಹಲಿ : ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಈ ಮೂರು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಆದ ಆಘಾತಕಾರಿ ಸೋಲಿನ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದು, ತನ್ನ “ಸಿದ್ಧಾಂತದ ಹೋರಾಟವು ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ. ಹಾಗೂ “ಜನತೆ ನೀಡಿದ ತೀರ್ಪನ್ನು ವಿನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು ಎಕ್ಸ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಅವರು, ‘ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯಗಳ ಚುನಾವಣೆಯಲ್ಲಿ ಜನಾದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ’ ಎಂದು ಹೇಳಿದ್ದಾರೆ.
‘ ನಾವು ನಡೆಸುತ್ತಿರುವ ಸೈದ್ಧಾಂತಿಕ ಹೋರಾಟವು ಮುಂದುವರಿಯಲಿದೆ. ತೆಲಂಗಾಣದ ಜತೆಗೆ ಧನ್ಯವಾದಗಳು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆಯಲ್ಲಿ ಅದ್ಭುತವಾಗಿ ಕೆಲಸ ಮಾಡಿ ಪಕ್ಷವನ್ನು ಬೆಂಬಲಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ