ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ.
ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.
ಛತ್ತೀಸ್ ಗಡದ ಮತಎಣಿಕೆ ಕಾರ್ಯ ಭಾರೀ ಕುತೂಹಲವನ್ನು ಕಾಯ್ದುಕೊಂಡಿದ್ದು ಹಾವು ಏಣಿಯಾಟದಂತೆ ಸಾಗುತ್ತಿದೆ. ಬಿಜೆಪಿ-
ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ
ರಾಜಸ್ಥಾನದ 198 ಕ್ಷೇತ್ರಗಳ ಮತಎಣಿಕೆಯಲ್ಲಿ ಬಿಜೆಪಿ 110 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ೭೪ ಸ್ಥಾನಗಳಲ್ಲಿ ಮತ್ತು ಇತರರು 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತ ಪಡೆಯಲು 100 ಸ್ಥಾನಗಳಲ್ಲಿ ಗೆಲ್ಲಬೇಕಿದೆ.

ಮಧ್ಯಪ್ರದೇಶದಲ್ಲಿಯೂ ಬಿಜೆಪಿ ಮುನ್ನಡೆ
ಮಧ್ಯಪ್ರದೇಶದಲ್ಲಿ ಬಿಜಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. 230 ಕ್ಷೇತ್ರಗಳ ಮತ ಎಣಿಕೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಭರ್ಜರಿ ಗೆಲುವಿನತ್ತ ಸಾಗುತ್ತಿದೆ. ಕಾಂಗ್ರೆಸ್‌ 72 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುತ ಪಡೆಯಲು 116 ಸ್ಥಾನಗಳನ್ನು ಗೆಲ್ಲಬೇಕು. ಆದರೆ ಆರಂಭಿಕ ಮುನ್ನಡೆ ನೋಡಿದರೆ ಬಿಜೆಪಿ ಎರಡನೇ ಮೂರರಷ್ಟು ಬಹುಮತ ಪಡೆಯುವತ್ತ ದಾಪುಗಾಲು ಇಡುತ್ತಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಕಮಲನಾಥ ಅವರು ಮತೆಣಿಕೆಯಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ಹಿಂದೆ ಬಿದ್ದಿದ್ದಾರೆ.
ತೆಲಂಗಾಣದಲ್ಲಿ ಮುನ್ನಡೆ ಗಳಿಸಿದ ಕಾಂಗ್ರೆಸ್
ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಸರಳ ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ. ಇದೇ ವೇಳೆ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಆಡಳಿತಾರೂಢ ಬಿಆರ್‌ಎಸ್‌ 41 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ 8 ಸ್ಥಾನಗಳಲ್ಲಿ ಹಾಗೂ ಓವೈಸಿಯ ಎಐಎಂಐಎಂ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಪ್ರಮುಖ ಸುದ್ದಿ :-   ಬಾಬಾ ರಾಮದೇವ ಕಂಪನಿ ತಯಾರಿಸಿದ 14 ಔಷಧಗಳ ತಯಾರಿಕಾ ಪರವಾನಗಿ ಅಮಾನತು ಮಾಡಿದ ಉತ್ತರಾಖಂಡ ಸರ್ಕಾರ

ಛತ್ತೀಸ್ಗಡದಲ್ಲಿ ಮ್ಯಾಜಿಕ್ ನಂಬರ್ ಪಡೆಯುವತ್ತ ಬಿಜೆಪಿ
ಛತ್ತೀಸ್ ಗಡ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತೀಚಿನ ಟ್ರೆಂಡ್‌ ಪ್ರಕಾರ ಬಿಜೆಪಿ 50 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 39 ಸ್ಥಾನಗಳಲ್ಲಿ ಹಾಗೂ ಒಂದು ಕ್ಷೇತ್ರದಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುತಮ ಪಡೆಯಲು ಯಾವುದೇ ಪಕ್ಷವಾದರೂ 46 ಸ್ಥಾನಗಳನ್ನು ಗೆಲ್ಲಬೇಕಿದೆ. ಮುಖ್ಯಮಂತ್ರಿ ಭೂಪೇಶ ಬಾಘೇಲಾ ಹಿಂದೆ ಬಿದ್ದಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement