ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ : ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ ಯತ್ನಾಳ

ಬೆಳಗಾವಿ : ವಿಧಾನಸಭೆಯ ವಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಆಗ್ರಹಿಸಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ನಾವು ಆ ಭಾಗದ ನಾಯಕರಿಗೆ ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡಬೇಕು. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

“ ಬಹಳಷ್ಟು ಅನುಕೂಲ ಇದ್ದವರನ್ನು ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ” ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement