ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಭಾವಪೂರ್ಣ ವಿದಾಯ

ಹಾಸನ: ಸೋಮವಾರ ಮೃತಪಟ್ಟಿದ್ದ 8 ಬಾರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿಯ ದಸರಾ ಅಂಬಾರಿ ಹೊತ್ತಿದ್ದ ದಸರಾ ಆನೆ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ವಿದಾಯ ಹೇಳಲಾಗಿದೆ.
ಅರ್ಜುನ ಹಾಸನ ಜಿಲ್ಲೆಯ ಸಕಲೇಶಪುರದ ದಬ್ಬಳ್ಳಿ ಕಟ್ಟೆ ಗ್ರಾಮದ ಬಳಿಯೇ ಅರ್ಜುನನ ಅಂತ್ಯಸಂಸ್ಕಾರ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ ನಡೆಯಿತು. ಹಾಸನ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು.
ಜೆಸಿಬಿ ಮೂಲಕ ಅರ್ಜುನನನ್ನು ಮಣ್ಣು ಮಾಡಲಾಯ್ತು. ಈ ವೇಳೆ ಅಲ್ಲಿ ನೆರೆದಿದ್ದವರು ಕಣ್ಣಾಲಿಗಳು ತುಂಬಿದ್ದವು.
ಅರ್ಜುನನ ಕಳೆಬರಕ್ಕೆ ಮೈಸೂರು ರಾಜಮನೆತನದ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಬಳಿಕ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಮಾವುತ ವಿನು ಪ್ರೀತಿಯ ಆನೆಗೆ ಕಣ್ಣೀರಿಡುತ್ತಲೇ ಪೂಜೆ ಮಾಡುವ ಮೂಲಕ ನಮನ ಸಲ್ಲಿಸಿದ್ದರು.
ಪೂಜೆ ಎಲ್ಲಾ ಮುಗಿದ ಮೇಲೆ ಜೆಸಿಬಿಯಿಂದ 15 ಅಡಿಗಳ ಆಳದವರೆಗೆ ಗುಂಡಿ ತೋಡಿ ಅಲ್ಲಿದ್ದ ಜನರು ಸಮಾಧಿಗೆ ಉಪ್ಪು, ಸುಣ್ಣ, ಬ್ಲೀಚಿಂಗ್ ಪೌಡರ್ ಹಾಕಿದರು. ಬಳಿಕ ಜೆಸಿಬಿ ಸಹಾಯದಿಂದ ಮೃತದೇಹವನ್ನು ಸಮಾಧಿಗೆ ಇಳಿಸಿ ಮಣ್ಣು ಮುಚ್ಚಲಾಯಿತು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement