ಲೋಕಸಭೆ ಚುನಾವಣೆ ಲೆಕ್ಕಾಚಾರ : ಮೂರು ರಾಜ್ಯಗಳ ಸಿಎಂ ಸ್ಥಾನಕ್ಕೆ ಬಿಜೆಪಿಯಿಂದ ಹೊಸ ಮುಖಗಳ ಆಯ್ಕೆ ಸಾಧ್ಯತೆ ; ವರದಿ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಗೆಲುವು ದಾಖಲಿಸಿರುವ ಬಿಜೆಪಿ ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ.
2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಭಾನುವಾರ ಫಲಿತಾಂಶ ಪ್ರಕಟವಾಗಿದೆ. ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವವು ಚರ್ಚೆ ನಡೆಸುತ್ತಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಈ ವೇಳೆ ಮೂರು ರಾಜ್ಯಗಳ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಉಪಸ್ಥಿತರಿದ್ದರು.

ದೀರ್ಘ ಕಾಲ ನಡೆದ ಈ ಸಭೆಯ ನಂತರ ಅಮಿತ್‌ ಶಾ ಮತ್ತು ಜೆ.ಪಿ. ನಡ್ಡಾ ಅವರು ಈ ಮೂರು ರಾಜ್ಯಗಳ ಬಿಜೆಪಿಯ ಉಸ್ತುವಾರಿಗಳೊಂದಿಗೆ ರಾಜ್ಯ ನಾಯಕರ ಬಗ್ಗೆ ಪ್ರತಿಕ್ರಿಯೆಯನ್ನು ಸಂಗ್ರಹಿಸುವ ಬಗ್ಗೆ ಸರಣಿ ಸಭೆಗಳನ್ನು ನಡೆಸಿದರು.
ಬಿಜೆಪಿಯ ಕೇಂದ್ರ ನಾಯಕತ್ವವು ಮೂರು ರಾಜ್ಯಗಳಿಗೆ ವೀಕ್ಷಕರನ್ನು ಶೀಘ್ರದಲ್ಲೇ ನೇಮಿಸುವ ಸಾಧ್ಯತೆಯಿದೆ. ಈ ವೀಕ್ಷಕರು ವಿಧಾನಸಭೆಯಲ್ಲಿ ತಮ್ಮ ನಾಯಕರನ್ನು ಆಯ್ಕೆ ಮಾಡಲು ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರ ಸಭೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.
ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರ ಜೊತೆ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇದ್ದಾರೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ ದಾಳಿಗೆ ಭಾರತದ ಪ್ರತಿದಾಳಿ: ಪಾಕಿಸ್ತಾನದ 3 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ...

ರಾಜಸ್ಥಾನದಲ್ಲಿಯೂ ಮುಖ್ಯಮಂತ್ರಿ ಹುದ್ದೆಗೆ ಹಲವಾರು ಹೆಸರುಗಳು ಕೇಳಿಬಂದಿವೆ . ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಜೊತೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅರ್ಜುನರಾಮ ಮೇಘವಾಲ್, ಪಕ್ಷದ ರಾಜ್ಯ ಅಧ್ಯಕ್ಷ ಸಿ.ಪಿ. ಜೋಶಿ ಮತ್ತು ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ್ ಬಾಲಕನಾಥ ಅವರನ್ನು ಸಂಭಾವ್ಯ ಅಭ್ಯರ್ಥಿಗಳು ಎಂದು ಪರಿಗಣಿಸಲಾಗಿದೆ.
ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣಕುಮಾರ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಆದಾಗ್ಯೂ, ಬಿಜೆಪಿ ನಾಯಕತ್ವವು ಈ ಹುದ್ದೆಗೆ ಅಚ್ಚರಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದು ಎಂದು ಹೇಳಾಗುತ್ತಿದೆ.

5 / 5. 4

ನಿಮ್ಮ ಕಾಮೆಂಟ್ ಬರೆಯಿರಿ

advertisement