ಚಿಕ್ಕಬಳ್ಳಾಪುರ : ಕೆರೆಗೆ ಉರುಳಿ ಬಿದ್ದ ಕಾರು, ನಾಲ್ವರು ಸಾವು

ಚಿಕ್ಕಬಳ್ಳಾಪುರ : ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಚಿಕ್ಕಬಳ್ಳಾಪುರ ಬೈಪಾಸ್​ಬಳಿಯ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ(22), ಆರ್ಯನ್(22), ವಸಂತ(21) ಎಂಬ ನಾಲ್ವರು ಯುವಕರು ಮೃತಪಟ್ಟಿದ್ದಾರೆ
ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದ್ದು ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಹೆದ್ದಾರಿಯಲ್ಲಿ ಕಾರಿನ ಹಿಂದೆ ಸಂಚರಿಸುತ್ತಿದ್ದ ಆಂಬುಲೆನ್ಸ್ ಚಾಲಕ‌ ಕಾರು ಉರುಳಿಬಿದ್ದಿನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳೀಯ ಅಗ್ನಿಶಾಮಕದಳ ಹಾಗೂ ಸಂಚಾರಿ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಹರಸಾಹಸ ಪಟ್ಟು ಕಾರನ್ನು ಕೆರೆಯಿಂದ ಮೇಲೆ ಎತ್ತಲಾಯಿತು. ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement