ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ.
ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ಡಿಸೆಂಬರ್ 6 ರಂದು ಮೊದಲು ಕರೆಯಲಾಗಿದ್ದ ಸಭೆಗೆ ಗೈರಾಗಲು ನಿರ್ಧರಿಸಿದ ನಂತರಸಭೆಯನ್ನು ಡಿಸೆಂಬರ್ 17 ಕ್ಕೆ ಮುಂದೂಡಲಾಗಿತ್ತು.
ಡಿಸೆಂಬರ್ 6 ರಂದು ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶಗಳು ಪ್ರಕಟವಾದ ದಿನದಂದು ಕಾಂಗ್ರೆಸ್‌ನಿಂದ ಸಭೆಯನ್ನು ಕರೆಯಲಾಗಿತ್ತು. ಮೂರು ರಾಜ್ಯಗಳಲ್ಲಿ ಬಿಜೆಪಿ ಅರ್ಧದಾರಿಯ ಗಡಿ ದಾಟುತ್ತಿದ್ದಂತೆಯೇ ಪ್ರತಿಪಕ್ಷಗಳ ಸಭೆಯನ್ನು ಪ್ರಕಟಿಸಲಾಗಿತ್ತು.

ಕಾಂಗ್ರೆಸ್ ಪಕ್ಷವು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸೋತಿದೆ ಮತ್ತು ಈಗ ಉತ್ತರ ಬೆಲ್ಟ್‌ನಲ್ಲಿ ಹಿಮಾಚಲ ಪ್ರದೇಶ ಮಾತ್ರ ಉಳಿದಿದೆ. ಅದು ತನ್ನದೇ ಆದ ಮೂರು ರಾಜ್ಯಗಳಲ್ಲಿ ಮಾತ್ರ ಆಡಳಿತ ನಡೆಸುತ್ತಿದೆ ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿಯಲ್ಲಿ ಕಿರಿಯ ಪಾಲುದಾರನಾಗಿ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಅಧಿಕಾರದಲ್ಲಿದೆ.
27 ಮೈತ್ರಿ ಪಕ್ಷಗಳ ಇಂಡಿಯಾ ಒಕ್ಕೂಟದ ಕೊನೆಯ ಸಭೆಯು ಮುಂಬೈನಲ್ಲಿ ನಡೆಯಿತು, ಇದನ್ನು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ ಠಾಕ್ರೆ ಆಯೋಜಿಸಿದ್ದರು ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ಎರಡು ದಿನಗಳ ಚರ್ಚೆಗಳಲ್ಲಿ, ಮೈತ್ರಿಯು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಪ್ರಮುಖ ಚುನಾವಣಾ ವಿಷಯಗಳನ್ನು ಚರ್ಚಿಸಿತು, ಸಮನ್ವಯ ಸಮಿತಿಯನ್ನು ರಚಿಸಿತು ಮತ್ತು 2024 ರ ಲೋಕಸಭೆ ಚುನಾವಣೆಗಳನ್ನು ‘ಸಾಧ್ಯವಾದಷ್ಟು’ ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.
ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ ನಡೆದು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಎಂದು ಮೈತ್ರಿಕೂಟಕ್ಕೆ ಹೆಸರು ಘೋಷಿಸಲಾಯಿತು.
ಮೊದಲ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪಾಟ್ನಾದಲ್ಲಿ ಆಯೋಜಿಸಿದ್ದರು. ‘ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು’ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ಈ ಪಕ್ಷಗಳು ನಿರ್ಧರಿಸಿದವು.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement