ಸೋಲದೇವನಹಳ್ಳಿಯ ತೋಟದಲ್ಲಿ ನಡೆದ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆಲಮಂಗಲದ ಬಳಿಯ ಸೋಲದೇವನಹಳ್ಳಿಯ ಅವರ ತೋಟದಲ್ಲಿ ಶನಿವಾರ ನೆರವೇರಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ೮೬ ವರ್ಷದ ಲೀಲಾವತಿ ಅವರು ಶುಕ್ರವಾರ ನಿಧನರಾಗಿದ್ದರು. ನೆಲಮಂಗಲದ ಸೋಲದೇವನಹಳ್ಳಿಯ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿನೋದರಾಜ ಅವರು ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಲೀಲಾವತಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ನೆಲಮಂಗಲದ ಅಂಬೇಡ್ಕರ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿನ ಅಂತಿಮ ದರ್ಶನದ ಬಳಿಕ ಸೋಲದೇವನಹಳ್ಳಿಗೆ ಬಂದ ಲೀಲಾವತಿ ಅವರ ಪಾರ್ಥಿವ ಶರೀರವನ್ನು ನವಿಲಿನಾಕೃತಿಯ ವಿಶೇಷ ಹೂವಿನ ಪಲ್ಲಕ್ಕಿಯಲ್ಲಿ ಮಲಗಿಸಲಾಗಿತ್ತು. ಸುಮಾರು 200 ಮೀಟರ್ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಸಾವಿರಾರು ಜನರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯಂತೆ ಸಕಲ ಸರ್ಕಾರಿ ಹಾಗೂ ಪೊಲೀಸ್ ಗೌರವ ಸಲ್ಲಿಸಲಾಯಿತು. ನಟ ವಿನೋದ ರಾ ಮತ್ತು ಮೊಮ್ಮಗ ಯುವರಾಜ್ ಅನೇಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಅಂತ್ಯಕ್ರಿಯೆ ವೇಳೆ ಅನೇಕ ಗಣ್ಯರು ಮತ್ತೊಂದು ಬಾರಿ ಅಂತಿಮ ನಮನ ಸಲ್ಲಿಸಿದ ಬಳಿಕ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಾಯಿತು
ಅನೇಕ ರಾಜಕೀಯ ಮುಖಂಡರು, ಸಿನಿಮಾ ತಾರೆಯರು ಮತ್ತು ಲೀಲಾವತಿ ಅವರು ಅಭಿಮಾನಿಗಳು ಸೋಲದೇವನಹಳ್ಳಿಗೆ ಆಗಮಿಸಿದ್ದರು. ಶುಕ್ರವಾರ ನಿಧನರಾಗಿದ್ದ ಅವರ ಅವರ ಅಂತಿಮ ದರ್ಶನಕ್ಕೆ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಶನಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಅಭಿಮಾನಿಗಳು ಅಂತಿಮ ದರ್ಶನ ಪಡೆದ ನಂತರ ಶನಿವಾರ ಮಧ್ಯಾಹ್ನ ಬೆಂಗಳೂರಿನಿಂದ ಪಾರ್ಥಿವ ಶರೀರ ಹೊತ್ತು ತಂದ ಆಂಬುಲೆನ್ಸ್ ನೆಲಮಂಗಲದ ಸೋಲದೇವನಹಲ್ಳಿಗೆ ತಲುಪಿತ್ತು. ಇಲ್ಲಿ ಗಮನಿಸಬೇಕಾದ ವಿಷಯವೆಂದರೇ ದಾರಿಯಲ್ಲಿಯೂ ಅಭಿಮಾನಿಗಳು ಆಂಬುಲೆನ್ಸ್ ತಡೆದು ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. 85 ವರ್ಷ ವಯಸ್ಸಾಗಿದ್ದ ಲೀಲಾವತಿಯವರು ಕನ್ನಡದಲ್ಲಿ 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement