ಕಾಂಗ್ರೆಸ್‌ 5ನೇ ಗ್ಯಾರಂಟಿ ʼಯುವನಿಧಿʼ ಯೋಜನೆಗೆ ಡಿಸೆಂಬರ್‌ 21ರಿಂದ ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ.
ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಖಾತೆ ಸಚಿವ ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದ್ದಾರೆ.
ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದು ಹಿಂದೆಯೇ ಘೋಷಿಸಲಾಗಿದೆ. ಈಗ ನೋಂದಣಿ ಪ್ರಕ್ರಿಯೆಗೆ ನೀಡುವ ದಿನಾಂಕವನ್ನು ಪ್ರಕಟಿಸಲಾಗಿದೆ. ಯುವನಿಧಿ ಮೂಲಕ ರಾಜ್ಯದ 5 ಲಕ್ಷ ನವ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೊಮಾ ಹೋಲ್ಡರ್‌ಗಳಿಗೆ ನೇರವಾಗಿ ಹಣ ತಲುಪಲಿದೆ ಎಂದು ನಿಗದಿಪಡಿಸಲಾಗಿದೆ.

ಯುವ ನಿಧಿ ಯೋಜನೆಯಾಗುವುದಕ್ಕೆ ಇರಬೇಕಾದ ಅರ್ಹತೆಗಳು, 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳ ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆ ಲಾಭ ದೊರಕಿದೆ. ವೃತ್ತಿಪರ ಕೋರ್ಸ್‌ಗಳಿಗೆ ಪ್ರತಿ ಎಲ್ಲಾ ಪದವೀಧರರಿಗೆ ತಿಂಗಳು 3,000 ರೂ. ನೀಡಲಾಗಿದೆ. ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ. ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಪದವಿ, ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗ ಭತ್ಯೆ ಇದ್ದರೆ. ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಪ್ರಮುಖ ಸುದ್ದಿ :-   ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ : ಸಂತ್ರಸ್ತ ಮಹಿಳೆ ವೀಡಿಯೊ ವೈರಲ್‌

ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟ. ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು). ಡಿ
ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಹೇಳಿಲ್ಲ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement