ಮೊದಲ ದಿನವೇ ಮಹತ್ವದ ನಿರ್ಧಾರ : ಧಾರ್ಮಿಕ-ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದ ಮಧ್ಯಪ್ರದೇಶದ ಸಿಎಂ

 

ಭೋಪಾಲ್‌ : ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಮೂಲಗಳ ಪ್ರಕಾರ, ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮಿತ ಮತ್ತು ನಿಯಂತ್ರಿತ (ಅನುಮತಿಸಬಹುದಾದ ಡೆಸಿಬಲ್) ಬಳಕೆಗೆ ಯಾವುದೇ ನಿರ್ಬಂಧವಿಲ್ಲ.
ನಿಯಂತ್ರಿತ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಮಿತಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಮತ್ತು ನಿಗದಿತ ಸಮಯದಲ್ಲಿ ಮಾತ್ರ ಎಂದು ಆದೇಶದಲ್ಲಿ ಕಾನೂನು ಪ್ರಕಾರ ಕಾರ್ಯನಿರ್ವಹಿಸುವ ಧ್ವನಿವರ್ಧಕಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅದು ಹೇಳಿದೆ. ಜೊತೆಗೆ, ಬಹಿರಂಗವಾಗಿ ಮಾಂಸ ಮಾರಾಟ ಮಾಡದಂತೆಯೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ನಂತರ, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ, ಬುಧವಾರ (ಡಿಸೆಂಬರ್ 13) ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರವು ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. “ಇಂದು ನಾವು ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಹಲವಾರು ಚರ್ಚೆಗಳನ್ನು ನಡೆಸಿದ್ದೇವೆ. ನಾವು ಬಹಿರಂಗವಾಗಿ ಮಾಂಸ ಮಾರಾಟದ ವಿಷಯವನ್ನು ಪ್ರಸ್ತಾಪಿಸಿದ್ದೇವೆ ಮತ್ತು ಇದಕ್ಕಾಗಿ ನಿಯಮಗಳನ್ನು ತರಲು ಪ್ರಸ್ತಾಪಿಸಿದ್ದೇವೆ … ” ಅವರು ಹೇಳಿದರು.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಪ್ರಧಾನಿ ಮೋದಿ ಸಮ್ಮುಖದಲ್ಲಿ ಯಾದವ್ ಪ್ರಮಾಣ ವಚನ
ಇದಕ್ಕೂ ಮುನ್ನ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ 58 ವರ್ಷದ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ರಾಜಧಾನಿ ಭೋಪಾಲದ ಲಾಲ್ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ ಕೂಡ ಉಪಸ್ಥಿತರಿದ್ದರು.
ಪ್ರಮಾಣ ವಚನ ಸಮಾರಂಭಕ್ಕೆ ತೆರಳುವ ಮುನ್ನ ಯಾದವ್ ಭೋಪಾಲದ ದೇವಸ್ಥಾನಕ್ಕೂ ಭೇಟಿ ನೀಡಿದ್ದರು. ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಲು ಅವರು ರಾಜ್ಯ ಬಿಜೆಪಿ ಕಚೇರಿಗೆ ತೆರಳಿದರು.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement