ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

 

ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ.
ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ ಕಾಂಗ್ರೆಸ್ ಪರವಾಗಿ ಮಾತನಾಡುತ್ತಿದ್ದಾರೆ. ಆದರೆ, ಬಿಜೆಪಿ ಬಗ್ಗೆ ಒಳಗೊಳಗೆ ಅಸಮಾಧಾನ ಹೊಂದಿರುವ ಶಿವರಾಮ ಹೆಬ್ಬಾರ ಹಾಗೂ ಎಸ್. ಟಿ. ಸೋಮಶೇಖರ ಭಾಗವಹಿಸಿದ್ದು ಈಗ ಅವರು ಸದ್ಯದಲ್ಲೇ ಕಾಂಗ್ರೆಸ್ ಸೇರುವ ವದಂತಿಗೆ ಮತ್ತಷ್ಟು ಪುಷ್ಠಿ ಒದಗಿಸಿದೆ.
ಬೆಳಗಾವಿ ಹೊರವಲಯದ ಶೂನ್ಯ ರೆಸಾರ್ಟ್ ನಲ್ಲಿ ಬುಧವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ, ಮತ್ತಿತರರು ಭಾಗವಹಿಸಿದ್ದರು.
ಬಿಜೆಪಿ ಅಧ್ಯಕ್ಷರ ಪ್ರತಿಕ್ರಿಯೆ….
ಡಿಸಿಎಂ ಡಿ.ಕೆ.ಶಿವಕುಮಾರ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕಾರಾದ ಶಿವರಾಮ ಹೆಬ್ಬಾರ, ಎಸ್.ಟಿ.ಸೋಮಶೇಖರ, ಎಚ್.ವಿಶ್ವನಾಥ ಪಾಲ್ಗೊಂಡ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇದು ಗಂಭೀರ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಔತಣಕೂಟದಲ್ಲಿ ಬಿಜೆಪಿಯ ಕೆಲ ಶಾಸಕರು ಭಾಗಿಯಾಗಿದ್ದರೆ ಅದು ಗಂಭೀರವಾದ ವಿಚಾರವಾಗಿದೆ. ಅವರನ್ನು ಕರೆದು ಚರ್ಚಿಸುತ್ತೇನೆ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement