ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದ್ದಾರೆ.

ಅಲ್ಲದೆ, ಈ ಯೋಜನೆಯು 2024 ಜನವರಿ 1ರಿಂದ ಜಾರಿಗೆ ಬರಲಿದೆ ಮತ್ತು ಇದಕ್ಕೆ ಅರ್ಜಿದಾರರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ ‘ಯುವ ನಿಧಿ’ ಕೂಡ ಒಂದಾಗಿದೆ. ಈ ಮುಂಚೆ ಡಿಸೆಂಬರ್ 26 ರಿಂದ ‘ಯುವ ನಿಧಿ’ ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಹೇಳಿದ್ದರು. ಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement