ರೈತರಿಗೆ ಸಿಹಿ ಸುದ್ದಿ…| ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ರಾಜ್ಯದಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲದ ಅಸಲು ಹಣ ಪಾವತಿಸಿದರೆ ಸಂಪೂರ್ಣವಾಗಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಎಲ್ಲ ರೈತರ ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ ಅವರು, ಆದರೆ ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ತೆಗೆದುಕೊಂಡ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲಕ್ಕೆ ಮಾತ್ರ ಈ ಬಡ್ಡಿ ಮನ್ನಾ ಅನ್ವಯವಾಗುತ್ತದೆ. ಹಾಗೂ ಸರ್ಕಾರ ಬಡ್ಡಿ ಮನ್ನಾ ಘೋಷಣೆ ಮಾಡಿದ ಅವಧಿಯಲ್ಲಿ ರೈತರು ತಾವು ಸಾಲ ಪಡೆದ ಅಸಲು ಮೊತ್ತ ಪಾವತಿಸಿದರೆ ಮಾತ್ರ ಈ ಬಡ್ಡಿ ಮನ್ನಾ ಅನ್ವಯ ಆಗಲಿದೆ ಎಂದು ತಿಳಿಸಿದರು. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಆದರೂ ನಾವು ಈ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement