ಸಚಿವ ಜಾರ್ಜ್ ವಿರುದ್ಧ ಅವಹೇಳನಕಾರಿ ಪೋಸ್ಟ್: ತೆಲಂಗಾಣದ ಬಿಆರ್‌ ಎಸ್ ಮುಖಂಡನ ಬಂಧನ

ಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿದ ಮೇರೆಗೆ ಸೈಬರ್ ಕ್ರೈಂ ಪೊಲೀಸರು ತೆಲಂಗಾಣದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ತೆಲಂಗಾಣದ ಕರೀಂನಗರದ ನಿವಾಸಿ ರವಿಕಾಂತ ಶರ್ಮಾ (33) ಬಂಧಿತ ಆರೋಪಿಯಾಗಿದ್ದಾನೆ. ಈತ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಪಕ್ಷದ ಐಟಿ ಸೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಈತನ ತಂದೆ -ತಾಯಿ ಇಬ್ಬರು ಸಹ ಪಾಲಿಕೆಯ ಮಾಜಿ ಸದಸ್ಯರಾಗಿದ್ದಾರೆ ಎಂದು ಹೇಳಲಾಗಿದೆ.
ಆರೋಪಿ ರವಿಕಾಂತ ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ವಿದ್ಯುತ್ ಪರಿಸ್ಥಿತಿ ಮತ್ತು ಗೃಹಜ್ಯೋತಿ ಯೋಜನೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಹಾಗೂ ನಕಲಿ ಆಡಿಯೋ ಕ್ಲಿಪ್ ಪೋಸ್ಟ್ ಮಾಡಿದ್ದ. ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement