ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾಔಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 20ರವರೆಗೂ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಡಿ.17ರ ಭಾನುವಾರದಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮಲೆನಾಡು ಭಾಗದಲ್ಲೂ ಮಳೆಯಾಗಬಹುದು. ಡಿ.18ರಂದು ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸೂಚನೆ ಇದೆ. ಅಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಇರಲಿದೆ. ಡಿ.18ರಂದು ಕರಾವಳಿ ಭಾಗದ ಮೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅಂದು ಹಗುರವಾಗಿ ಮಳೆಯಾಗಬಹುದು. ಉತ್ತರ ಕರ್ನಾಟಕದ ಕೆಲವು ಕಡೆಗಳಲ್ಲಿ ಅಂದು ಹಗುರ ಮಳೆಯಾಗುವ ಸಾಧ್ಯತೆಯ ಬಗ್ಗೆ ಸೂಚನೆ ನೀಡಲಾಗಿದೆ.

ಡಿ.19ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ.ಡಿ.20 ರಂದು ಕರಾವಳಿಯ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಹಗುರವಾಗಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬೆಂಗಳೂರು, ಮಲೆನಾಡು ಭಾಗಗಳಲ್ಲೂ ಹಗುರ ಮಳೆಯ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ.
ರಾಜ್ಯದ ಹಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ತೀವ್ರ ಇಳಿಕೆ ಕಂಡು ಬಂದಿದ್ದು, ಚಳಿಯ ಪ್ರಮಾಣ ಅಧಿಕವಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಚಳಿ ತೀವ್ರತೆ ಹೆಚ್ಚಿದೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement