ಕೋಲಾರ: ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

ಕೋಲಾರ : ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.
ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ ಹಾಗೂ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನಕುಮಾರ ರಾಜ ಅವರು, ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಮಾಜ ಕಲ್ಯಾಣ ಸಚಿವ ಡಾ‌.ಎಚ್.ಸಿ.ಮಹದೇವಪ್ಪ ಅವರು, ‘ಇದೊಂದು ಗಂಭೀರವಾದ ಸಂಗತಿಯಾಗಿದೆ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ದೊಡ್ಡ ಲೋಪ ಎಸಗಿದ್ದಾರೆ. ಹೀಗಾಗಿ, ಅಮಾನತುಗೊಳಿಸಿ ತನಿಖೆ ನಡೆಸಲು ನಿರ್ದೇಶನ ನೀಡಿದ್ದೇನೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಪ್ರಕರಣದ ಬಗ್ಗೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೋಲಾರದ ಮಾಲೂರು ಮಲದಗುಂಡಿ ಪ್ರಕರಣದಿಂದ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ತರಿಸುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement