ವೀಡಿಯೊ…| ವಾರಾಣಸಿಯಲ್ಲಿ ರೋಡ್‌ಶೋನಲ್ಲಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆ ನಿಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅವರ ಬೆಂಗಾವಲು ಪಡೆ ಸ್ವಲ್ಪ ಹೊತ್ತು ನಿಂತಿದೆ. ಪ್ರಧಾನಿಯವರ ವಾಹನದ ಮೇಲಿದ್ದ ಭದ್ರತಾ ಸಿಬ್ಬಂದಿಯೊಂದಿಗೆ ಬೆಂಗಾವಲು ಪಡೆಯು ಬ್ಯಾರಿಕೇಡ್ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಆಂಬ್ಯುಲೆನ್ಸ್ ಗೆ ವೇಗವಾಗಿ ಚಲಿಸಲು ದಾರಿಮಾಡಿಕೊಟ್ಟಿರುವುದನ್ನು ವೀಡಿಯೊ ತೋರಿಸಿದೆ.
ಪ್ರಧಾನಿ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ಅಲ್ಲಿ ಅವರು ಪ್ರದೇಶದ ಅಭಿವೃದ್ಧಿಗಾಗಿ ₹ 19,000 ಕೋಟಿ ಮೌಲ್ಯದ 37 ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ. ಅವರು ಕಾಶಿ ತಮಿಳು ಸಂಗಮಂನ ಎರಡನೇ ಆವೃತ್ತಿಯನ್ನು ಉದ್ಘಾಟನೆ ಮಾಟಡಿದ್ದಾರೆ. ಕನ್ಯಾಕುಮಾರಿ ಮತ್ತು ವಾರಣಾಸಿ ನಡುವೆ ಹೊಸ ರೈಲಿಗೆ ಹಸಿರು ನಿಶಾನೆ ತೋರುತ್ತಿದ್ದಾರೆ.

ವಿಐಪಿ ಸಂಸ್ಕೃತಿಯ ವಿರುದ್ಧ ದನಿಯೆತ್ತಿರುವ ಪ್ರಧಾನಿ ಆಂಬ್ಯುಲೆನ್ಸ್‌ಗಾಗಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದು ಇದೇ ಮೊದಲಲ್ಲ. ಕಳೆದ ವರ್ಷ ಅಹಮದಾಬಾದ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಇದೇ ರೀತಿ ಮಾಡಿದ್ದರು.
ಅಹಮದಾಬಾದ್ ರ್ಯಾಲಿಯಲ್ಲಿ ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿತು.

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಸೆಪ್ಟೆಂಬರ್ 30, 2022 ರಂದು, ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು.
ನವೆಂಬರ್ 2022 ರಲ್ಲಿ, ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಚಂಬಿಯಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದ್ದರು. ಅವರು ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದ ರ್ಯಾಲಿಯಿಂದ ಹಿಂದಿರುಗುತ್ತಿದ್ದರು.

ಪ್ರಮುಖ ಸುದ್ದಿ :-   'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement