ಗೋಕಾಕ | ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

ಬೆಳಗಾವಿ : ರಾತ್ರಿ ವೇಳೆ ಸಿಲಿಂಡರ್ ಸ್ಪೋಟಗೊಂಡು 7 ಜನರಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆಯಲ್ಲಿ
9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿವೆ. ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿದೆ. ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ಸೋಮನಗೌಡ (44), ದೀಪಾ (42) ನವೀನ (14), ವಿದ್ಯಾ (13) ಬಸನಗೌಡ ನಿರ್ವಾಣಿ( 9 ತಿಂಗಳು) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಾಗಿದೆ. ಇನ್ನುಳಿದವರಿಗೆ ಸ್ಥಳೀಯ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement