‘ಸುಳ್ಳು, ಆಧಾರರಹಿತ’…. : ಅತ್ಯಾಚಾರ ಆರೋಪ ನಿರಾಕರಿಸಿದ ಉದ್ಯಮಿ ಸಜ್ಜನ್ ಜಿಂದಾಲ್

ಮುಂಬೈ: ಜೆಎಸ್‌ಡಬ್ಲ್ಯು ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ಅವರು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಸಜ್ಜನ್ ಜಿಂದಾಲ್ ಪರವಾಗಿ ನೀಡಿದ ಹೇಳಿಕೆ ನೀಡಲಾಗಿದ್ದು, ಅದು ಆರೋಪವನ್ನು “ಸುಳ್ಳು ಮತ್ತು ಆಧಾರರಹಿತ” ಎಂದು ಕರೆದಿದೆ.
ಜಿಂದಾಲ್ ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಾರೆ. ಆದರೆ ತನಿಖೆ ನಡೆಯುತ್ತಿರುವುದರಿಂದ ಅವರು ಈ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ ಎಂದು ಹೇಳಿಕೆ ತಿಳಿಸಿದೆ.
30 ವರ್ಷದ ವೈದ್ಯರೊಬ್ಬರು ಸಜ್ಜನ್ ಜಿಂದಾಲ್ ವಿರುದ್ಧ ಆರೋಪ ಮಾಡಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಮುಂಬೈನಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ ಐಆರ್‌) ದಾಖಲಿಸಲಾಗಿದೆ. ದೂರು ನೀಡಿ ಹಲವು ತಿಂಗಳು ಕಳೆದರೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಳು ಮತ್ತು ನಂತರ ತನ್ನ ದೂರು ದಾಖಲಾಗದಿದ್ದಾಗ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಳು.
ಎಫ್‌ಐಆರ್‌ನಲ್ಲಿ, 2021 ರಲ್ಲಿ ಐಪಿಎಲ್ ಪಂದ್ಯದ ವೇಳೆ ದುಬೈನಲ್ಲಿ ಸಜ್ಜನ್ ಜಿಂದಾಲ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ಜಿಂದಾಲ್, ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಎಫ್‌ಐಆರ್‌ನಲ್ಲಿ, ಜಿಂದಾಲ್ ತನ್ನ ಮೇಲೆ ಜನವರಿ 24, 2022 ರಂದು ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement