ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ: ಕನ್ನಡದ ಖ್ಯಾತ ಲೇಖಕ ಲಕ್ಷ್ಮೀಶ ತೋಳ್ಪಾಡಿ (Lakshmisha Tolpadi) ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ.
ಲಕ್ಷ್ಮೀಶ ತೋಳ್ಪಾಡಿ ಅವರ ʼಮಹಾಭಾರತದ ಅನುಸಂಧಾನದ ಭಾರತಯಾತ್ರೆʼ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಅಲ್ಲದೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗಿವೆ. ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಇವರದು ತೋಳ್ಳಾಡಿತ್ತಾಯ ವೈದಿಕ ಮನೆತನವಾಗಿದ್ದು, ತುಳು ಆಡುಭಾಷೆಯಾಗಿದೆ.
ಒಟ್ಟು 24 ಭಾಷೆಗಳ ಕೃತಿಗಳಿಗೆ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಪಾಯಿ, ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಮಾರ್ಚ್ 12ರಂದು ದೆಹಲಿಯ ಕಾಮಿನಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement