ಬಸ್‌ನಲ್ಲಿ ಪ್ರಯಾಣಿಸುವರು ಮಾಸ್ಕ್‌ ಧರಿಸಬೇಕು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಮಾನ್ಯವಾಗಿ ಹೆಚ್ಚು ಜನ ಸೇರುವಲ್ಲಿ ವೈರಾಣುಗಳು ಬಹುಬೇಗ ಹರಡುತ್ತವೆ. ಹೀಗಾಗಿ ಬಸ್‌ಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರೆಲ್ಲರೂ ಮಾಸ್ಕ್‌ ಧರಿಸಿ ಸಂಚಾರ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೆಲವು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ಸರ್ಕಾರ ಈಗಾಗಲೇ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಬಸ್‌ಗಳಲ್ಲಿ ಸಂಚಾರ ಮಾಡುವವರು ಮಾಸ್ಕ್ ಅನ್ನು ಧರಿಸಿ ತಮ್ಮ ಆರೋಗ್ಯದ ಜೊತೆಗೆ ಬೇರೆಯವರ ಆರೋಗ್ಯ ಕಾಪಾಡಬೇಕು ಎಂದು ಹೇಳಿದ್ದಾರೆ .
ಕೇರಳಕ್ಕೆ ಹೋಗುವ ಬಸ್‌ಗಳಿಗೆ ಸ್ಯಾನಿಟೈಸರ್‌ ಸಿಂಪಡಣೆ
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಅಲ್ಲಿ ಸಾಕಷ್ಟು ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ನಾವು ಕಟ್ಟೆಚ್ಚರ ವಹಿಸಬೇಕಿದೆ. ಹೀಗಾಗಿ ಕೇರಳದಿಂದ ಬರುವ ಹಾಗೂ ಅಲ್ಲಿಗೆ ಹೋಗುವ ಬಸ್‌ಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ಕ್ರಿಸ್ಮಸ್, ನ್ಯೂಇಯರ್‌ ಸೆಲೆಬ್ರೇಷನ್‌ಗೆ ನಿರ್ಬಂಧ ಇಲ್ಲ
ಡಿಸೆಂಬರ್‌ 21ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಸಭೆ ಇದೆ. ಅಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಕ್ರಿಸ್ಮಸ್ ಹಾಗೂ ನ್ಯೂಇಯರ್‌ ಸೆಲೆಬ್ರೇಷನ್‌ಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ. ಮುಂದಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ವಿದೇಶಗಳಿಂದ ಬಂದವರ ಮೇಲೆ ನಿಗಾ ಇಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರ ಜೊತೆ ನಡೆದ ಸಭೆಯಲ್ಲಿ ಪ್ರಶ್ನಿಸಲಾಗಿದೆ. ಆದರೆ, ಸದ್ಯಕ್ಕೆ ಯಾವುದೇ ನಿರ್ಬಂಧ ಹೇರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement