ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಡ್ವಾಣಿ, ಜೋಶಿಗೆ ಆಹ್ವಾನಿಸಿದ ವಿ ಎಚ್‌ ಪಿ

ನವದೆಹಲಿ: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಹಿರಿಯರಾದ ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರಿಗೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಹ್ವಾನ ನೀಡಿದೆ.
ಅಡ್ವಾಣಿ ಮತ್ತು ಜೋಶಿ ಇಬ್ಬರೂ ರಾಮಮಂದಿರಕ್ಕಾಗಿ ಆಂದೋಲನದ ಮುಂಚೂಣಿಯಲ್ಲಿದ್ದರು. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ… ಇಬ್ಬರೂ ಹಿರಿಯರು ಪಾಲ್ಗೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಹೇಳಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಸದಸ್ಯ ಅಲೋಕಕುಮಾರ ಹೇಳಿದರು.

ಎಲ್‌.ಕೆ. ಅಡ್ವಾಣಿ (96) ಮತ್ತು ಮುರಳಿ ಮನೋಹರ ಜೋಶಿ (90 ) ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಮುಂದಿನ ತಿಂಗಳ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ ಎಂದು ದೇವಸ್ಥಾನದ ಟ್ರಸ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ಅಯೋಧ್ಯಾ ರಾಮ ಮಂದಿರ ಆಂದೋಲನ, ಹೋರಾಟದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ದೇಶದ ಮೂಲೆ ಮೂಲೆಯಲ್ಲಿ ರಾಮ ಭಕ್ತರನ್ನು ಸಂಘಟಿಸಿ ಹೋರಾಟ ನಡೆಸಿದ ನಾಯಕರು. ಆದರೆ ವಯಸ್ಸಿನ ಕಾರಣದಿಂದ ರಾಮ ಮಂದಿರ ಪ್ರಾಣಪ್ರತಿಷ್ಠಿಗೆ ಬರಬೇಡಿ ಎಂದು ರಾಮ ಮಂದಿರ ಟ್ರಸ್ಟ್ ಮನವಿ ಮಾಡಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.

ಈಗ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಇಬ್ಬರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆಗೆ ಆಹ್ವಾನ ನೀಡಲಾಗಿದ್ದು ಈ ವೇಳೆ ಇಬ್ಬರು ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.
ಇಬ್ಬರೂ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಸಮಾರಂಭಕ್ಕೆ ಬಾರದಂತೆ ವಿನಂತಿಸಲಾಯಿತು, ಅದನ್ನು ಇಬ್ಬರೂ ಒಪ್ಪಿಕೊಂಡರು” ಎಂದು ದೇವಸ್ಥಾನದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ ರಾಯ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿತ್ತು.
ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಉದ್ಘಾಟಿಸಲಿದ್ದಾರೆ

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement