ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೇನ್‌ ಹ್ಯಾಮರೇಜ್‌ ಆಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಎಂದು ವರದಿಯಾಗಿದೆ.
ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮಿಸುತ್ತಿದ್ದಾರೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರ ಜೊತೆ ತೆರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ತಮ್ಮ ನೆಗೆಟಿವ್ ಪಾತ್ರಗಳಿಂದ ಆಕೆ ಹೆಚ್ಚು ಜನಪ್ರಿಯತೆ ಗಳಿಸಿದ್ದರು. 1976ರಲ್ಲಿ ‘ಪೆಳ್ಳಿಕಾನಿ ಪೆಳ್ಳಿ’ ಚಿತ್ರದ ಮೂಲಕ ನಾಯಕಿಯಾಗಿ ಹೇಮಾ ಚೌಧರಿ ಚಿತ್ರರಂಗ ಪ್ರವೇಶಿಸಿದರು. ಬಳಿಕ 80ರ ದಶಕದಲ್ಲಿ ಪೋಷಕ ಪಾತ್ರಗಳತ್ತ ಮುಖ ಮಾಡಿದರು. ಇನ್ನು ತಮಿಳಿನ ‘ಮನ್ಮಥ ಲೀಲೈ’ ಚಿತ್ರದಲ್ಲಿ ಕಮಲ್ ಹಾಸನ್ ಜೊತೆಯಾಗಿದ್ದರು. 1976ರಲ್ಲಿ ‘ವಿಜಯವಾಣಿ’ ಸಿನಿಮಾ ಮೂಲಕ ಕನ್ನಡ ಸಿನೆಮಾಕ್ಕೆ ಪ್ರವೇಶಿಸಿದರು. ಕನ್ನಡದಲ್ಲೇ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಬೆಂಗಳೂರಿನಲ್ಲೇ ನೆಲೆಸಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement