5 ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿದ್ದ ವ್ಯಕ್ತಿ ಸಾವು: ದಿನೇಶ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಮಂಗಳವಾರ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಅವರು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ನಮ್ಮ ರಾಜ್ಯದಲ್ಲಿ ಚಾಮರಾಜನಗರ ನಿವಾಸಿ 64 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ ಕೋವಿಡ್ ಜೊತೆಗೆ ಹೃದಯದ ತೊಂದರೆ, ಟಿಬಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳು ಸಹ ಇತ್ತು ಎಂದು ಸಚಿವರು ತಿಳಿಸಿದ್ದಾರೆ. ಗುರುವಾರ ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಕೋವಿಡ್​ನಿಂದ ಕೇರಳದಲ್ಲಿ ಐದು ಜನರ ಮೃತಪಟ್ಟಿದ್ದಾರೆ.‌ ಅವರಿಗೂ ಹೃದಯ ಸಂಬಂಧಿ ತೊಂದರೆ, ಕ್ಯಾನ್ಸರ್ ಸಮಸ್ಯೆ ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಸಾವು ಆಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಒಂದು ಸಾವು ಆಗಿದೆ. ಮೃತಪಟ್ಟರಿಗೆ ಹೃದಯ ಸಂಬಂಧಿ ಕಾಯಿಲೆ ಹಾಗೂ ಅಸ್ತಮಾ ಕಾಯಿಲೆ ಇತ್ತು. ಇದರೊಂದಿಗೆ ಕೋವಿಡ್ ಬಂದ ಹಿನ್ನೆಲೆಯಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್‌ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ಆದ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದರು.

ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಕರ್ನಾಟಕದ ನಾಲ್ಕು ಜಿಲ್ಲೆಗಳು ಕೇರಳ ಗಡಿ ಭಾಗದಲ್ಲಿದೆ. ಹೀಗಾಗಿ ರಾಜ್ಯದಲ್ಲಿ ನಾವು ಎಚ್ಚರಿಕೆಯನ್ನು ವಹಿಸಿದ್ದೇವೆ. ಸದ್ಯಕ್ಕೆ ಕರ್ನಾಟಕದಲ್ಲಿ ಭಯಪಡುವಂತಹ ಪರಿಸ್ಥಿತಿ ಇಲ್ಲ. ನಾವು ಕೋವಿಡ್ ಟೆಸ್ಟಿಂಗ್‌ಗಳನ್ನು ಹೆಚ್ಚು ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಐಸಿಯು ಬೆಡ್, ವೆಂಟಿಲೇಟರ್ಸ್, ಆಕ್ಷಿಜನ್ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡಿದ್ದೇವೆ. ಈಗಾಗಲೇ ಎಲ್ಲ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದಾಗ ಕೇಂದ್ರದ ನೆರವನ್ನು ಕೋರಲಾಗುವುದು ಎಂದು ಹೇಳಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement