ಕಲಬುರಗಿ: ಜೀಪ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಸಂತೋಷ (40), ಶಂಕರ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರೆಲ್ಲರೂ ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಪೂಜಾ ದೊಡ್ಡಮನಿ (30)ಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಕಮಾಂಡೋ ಜೀಪ್ ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ