ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆಗೆ ಆಹ್ವಾನ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ ನಾಯಕರನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್‌.ಡಿ. ದೇವೇಗೌಡರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ ಬಂದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಹಿರಿಯ ಕಾಂಗ್ರೆಸ್ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ.
ಆಮಂತ್ರಣಗಳನ್ನು ಟ್ರಸ್ಟ್‌ ನಿಯೋಗದಿಂದ ತಲುಪಿಸಲಾಗಿದೆ, ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ಅರವಿಂದ್ ಕೇಜ್ರಿವಾಲ್, ಬಿಎಸ್‌ಪಿ ನಾಯಕಿ ಮಾಯಾವತಿ, ಸಿಪಿಎಂ ನಾಯಕ ಸೀತಾರಾಮ ಯೆಚೂರಿ ಮತ್ತು ಸಿಪಿಐನ ಡಿ ರಾಜಾ ಸೇರಿದಂತೆ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಾಧ್ಯತೆಯಿದೆ.
₹ 1,800 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಂಕೀರ್ಣದಲ್ಲಿ ಮೊದಲ ದೊಡ್ಡ ಕಾರ್ಯಕ್ರಮವಾದ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಮಾತನಾಡುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ಕೆಲವು ದಿನಗಳ ಹಿಂದೆ, 1990 ರ ದಶಕದಲ್ಲಿ ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಹಿರಿಯರಾದ ಎಲ್‌.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಕಾರ್ಯಕ್ರಮವನ್ನು ಬಿಟ್ಟುಬಿಡುವಂತೆ ಮನವಿ ಮಾಡಲಾಗಿತ್ತು ಎಂದು ದೇವಸ್ಥಾನದ ಟ್ರಸ್ಟ್ ಹೇಳಿತ್ತು. ಆದರೆ ಒಂದು ದಿನದ ನಂತರ, ವಿಶ್ವ ಹಿಂದೂ ಪರಿಷತ್ (VHP) ಅವರಿಬ್ಬರನ್ನು ಆಹ್ವಾನಿಸಲಾಗಿದೆ ಮತ್ತು ಸಮಾರಂಭದಲ್ಲಿ ಅವರು ಪಾಲ್ಗೊಳ್ಳುವಂತೆ ಮಾಡಲು “ಎಲ್ಲ ಪ್ರಯತ್ನಗಳನ್ನು” ಮಾಡುವುದಾಗಿ ಹೇಳಿದೆ.
ದೇವಾಲಯದ ಟ್ರಸ್ಟ್ ಸಂತರು, ವಿಜ್ಞಾನಿಗಳು, ಸೇನಾ ಅಧಿಕಾರಿಗಳು, ಪದ್ಮ ಪ್ರಶಸ್ತಿ ಪುರಸ್ಕೃತರು, ಕೈಗಾರಿಕೋದ್ಯಮಿಗಳು, ದಲೈ ಲಾಮಾ ಮತ್ತು ವಿವಿಧ ಕ್ಷೇತ್ರಗಳ ಇತರ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಿದೆ.
ಆಸ್ಪತ್ರೆಯೊಂದಿಗೆ ಅಲ್ಲಿ ಟೆಂಟ್ ಸಿಟಿಯನ್ನು ಸ್ಥಾಪಿಸಲಾಗಿದ್ದು, ದೇಶಾದ್ಯಂತ 150 ವೈದ್ಯರು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement