ವೀಡಿಯೊ…| ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಬ್ರಿಜ್ ಭೂಷಣ ಸಹಾಯಕ ಆಯ್ಕೆ : ಅಳುತ್ತಲೇ ಕುಸ್ತಿಗೆ ವಿದಾಯ ಹೇಳಿದ ಒಲಿಂಪಿಕ್ ಕುಸ್ತಿಪಟು

ನವದೆಹಲಿ : ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ ಸಿಂಗ್ ಹುದ್ದೆಯಿಂದ ಕೆಳಗಿಳಿದ ನಂತರ ನಡೆದ ಚುನಾವಣೆಯ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಒಲಿಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ಭಾವನಾತ್ಮಕ ಗುಡ್‌ ಬೈ ಹೇಳಿದ್ದಾರೆ.
ಈಗ ಅಧ್ಯಕ್ಷ ಸ್ಥಾನಕ್ಕೆ ಸಂಜಯ ಸಿಂಗ್ ಅವರು 12 ವರ್ಷಗಳ ಕಾಲ ಭಾರತ ಕುಸ್ತಿ ಒಕ್ಕೂಟದ (WFI) ಮುಖ್ಯಸ್ಥರಾಗಿದ್ದ ಬ್ರಿಜ್ ಭೂಷಣ ಶರಣ ಸಿಂಗ್ ಅವರ ಸಹಾಯಕರಾಗಿ ದೀರ್ಗಾವಧಿ ವರೆಗೆ ಕೆಲಸ ಮಾಡಿದ್ದಾರೆ. ಉತ್ತರ ಪ್ರದೇಶದ ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ಹುದ್ದೆಯಿಂದ ದೂರ ಸರಿಯಬೇಕಾಯಿತು.
ಇಂದು, ಗುರುವಾರ ನಡೆದ ಚುನಾವಣೆಯಲ್ಲಿ ಸಂಜಯ ಸಿಂಗ್ ಅವರು 47 ಮತಗಳಲ್ಲಿ 40 ಮತಗಳನ್ನು ಗಳಿಸಿದರು. ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನಕ್ಕೆ ಪ್ರತಿಭಟನಾನಿರತ ಕುಸ್ತಿಪಟುಗಳ ಅಭ್ಯರ್ಥಿಯಾಗಿದ್ದ ಅನಿತಾ ಶೆಯೊರನ್ ಅವರು ಕೇವಲ ಏಳು ಮತಗಳನ್ನು ಪಡೆದರು.
ದೇಶದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ ಫೋಗಟ್ ಮತ್ತು ಬಜರಂಗ್ ಪುನಿಯಾ ಫಲಿತಾಂಶಗಳ ಬಗ್ಗೆ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಸಂವಾದದಲ್ಲಿ ಅಳಲು ತೋಡಿಕೊಂಡ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಅವರು, “ಈಗ ಸಂಜಯ ಸಿಂಗ್ ಫೆಡರೇಶನ್‌ನ ಮುಖ್ಯಸ್ಥರಾಗಿ ಆಯ್ಕೆಯಾದ ನಂತರ, ಮಹಿಳಾ ಕುಸ್ತಿಪಟುಗಳು ಕಿರುಕುಳವನ್ನು ಎದುರಿಸುತ್ತಲೇ ಇರುತ್ತಾರೆ.” “ದೇಶದಲ್ಲಿ ನ್ಯಾಯವನ್ನು ಹೇಗೆ ಕಂಡುಹಿಡಿಯುವುದು ಎಂಬುದರ ಬಗ್ಗೆ ನನಗೆ ಯಾವುದೇ ಸುಳಿವು ಇಲ್ಲ” ಎಂದು ಶ್ರೀಮತಿ ಫೋಗಟ್ ಹೇಳಿದರು. “ನಮ್ಮ ಕುಸ್ತಿ ವೃತ್ತಿಜೀವನದ ಭವಿಷ್ಯವು ಕತ್ತಲೆಯಲ್ಲಿದೆ. ಎಲ್ಲಿಗೆ ಹೋಗಬೇಕೆಂದು ನಮಗೆ ತಿಳಿದಿಲ್ಲ” ಎಂದು ಅವರು ಹೇಳಿದರು.
ಒಲಂಪಿಕ್ ಕಂಚಿನ ಪದಕ ವಿಜೇತ ಪುನಿಯಾ ಅವರು, “ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದಿರುವುದು ದುರದೃಷ್ಟಕರ” ಎಂದು ಹೇಳಿದರು. “ನಾವು ಯಾವುದೇ ಪಕ್ಷದೊಂದಿಗೆ ನಂಟು ಹೊಂದಿಲ್ಲ, ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ, ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು, ಆದರೆ ಇಂದು ಬ್ರಿಜ್ ಭೂಷಣ ಶರಣ ಸಿಂಗ್ ಅವರ ಸಹಾಯಕ WFI ಅಧ್ಯಕ್ಷರಾಗಿದ್ದಾರೆ ಎಂದು ಅವರು ಹೇಳಿದರು.

https://twitter.com/SakshiMalik/status/1737803756069167542?ref_src=twsrc%5Etfw%7Ctwcamp%5Etweetembed%7Ctwterm%5E1737803756069167542%7Ctwgr%5E1dea48ee32200d1298a46f61bca7c6ea6a9fb4c7%7Ctwcon%5Es1_&ref_url=https%3A%2F%2Fwww.prajavani.net%2Fsports%2Fother-sports%2Folympic-medallistsakshi-malik-quits-wrestling-after-brij-bhushan-loyalist-becomes-wfi-chief-2613057

ಕುಸ್ತಿ ಸಂಸ್ಥೆಯು ಮಹಿಳಾ ಮುಖ್ಯಸ್ಥರನ್ನು ಪಡೆಯಬೇಕೆಂದು ತಾವು ಬಯಸಿದ್ದೆವು.ಆದರೆ ಅದು ಸಂಭವಿಸಲಿಲ್ಲ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ. “ನಾವು ಹೋರಾಡಿದೆವು, ಆದರೆ ಆಯ್ಕೆಯಾದ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ ಅವರ ಸಹಾಯಕರಾಗಿದ್ದರೆ, ಅವರ ವ್ಯಾಪಾರ ಪಾಲುದಾರರಾಗಿದ್ದರೆ, ನಾನು ಕುಸ್ತಿಯನ್ನು ತ್ಯಜಿಸುತ್ತೇನೆ” ಎಂದು ಒಲಿಂಪಿಕ್ ಕಂಚಿನ ಪದಕ ವಿಜೇತೆ ಹೇಳಿದರು.
ಈ ವರ್ಷದ ಜನವರಿಯಲ್ಲಿ, ಮೂವರು ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಸರ್ಕಾರ ತನಿಖೆಗೆ ಆದೇಶಿಸಿದ ನಂತರ ಅವರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು. ಬ್ರಿಜ್ ಭೂಷಣ ಶರಣ ಸಿಂಗ್ ಅವರ ಯಾವುದೇ ಸಹಾಯಕ ಅಥವಾ ಸಂಬಂಧಿ ಕುಸ್ತಿ ಸಂಸ್ಥೆಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ಕುಸ್ತಿಪಟುಗಳಿಗೆ ಭರವಸೆ ನೀಡಲಾಯಿತು. ಬ್ರಿಜ್ ಭೂಷಣ್ ಅವರ ಪುತ್ರ ಪ್ರತೀಕ್ ಮತ್ತು ಅಳಿಯ ವಿಶಾಲ್ ಸಿಂಗ್ ಚುನಾವಣಾ ಸ್ಪರ್ಧೆಗೆ ಪ್ರವೇಶಿಸದಿದ್ದರೂ, ಅವರ ಸಹಾಯಕ ಸಂಜಯ್ ಸಿಂಗ್ ಅವರ ನಾಮಪತ್ರ ಸಲ್ಲಿಸಿದರು.
ಸಂಜಯ ಸಿಂಗ್ ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. ಅವರು WFI ಯ ಕೊನೆಯ ಕಾರ್ಯಕಾರಿ ಮಂಡಳಿಯ ಭಾಗವಾಗಿದ್ದರು ಮತ್ತು 2019 ರಿಂದ ಅದರ ಜಂಟಿ ಕಾರ್ಯದರ್ಶಿಯಾಗಿದ್ದರು.
ಗುರುವಾರ ನಡೆದ ಚುನಾವಣೆಯಲ್ಲಿ ತಮ್ಮ ಗೆಲುವಿನ ನಂತರ, ಇದು ಸುಳ್ಳಿನ ಮೇಲೆ ಸತ್ಯದ ಗೆಲುವು ಎಂದು ಸಂಜಯ ಸಿಂಗ್ ಹೇಳಿದರು. ಆ ಗುಣಲಕ್ಷಣಗಳಿಗೆ ಸ್ಥಾನವಿಲ್ಲದ ವ್ಯಕ್ತಿಯ ವಿರುದ್ಧ ಅವರು ಇಂತಹ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು. ನೀವು ಬಿಜೆಪಿ ಸಂಸದರಿಗೆ ನಿಕಟವಾಗಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಖಂಡಿತವಾಗಿ, ನಾನು ಅವರಿಗೆ ಹತ್ತಿರವಾಗಿದ್ದೇನೆ” ಎಂದು ಹೇಳಿದರು. ಫೆಡರೇಶನ್ ಈಗ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬ ಬಗ್ಗೆ ಕುಸ್ತಿಪಟುಗಳ ಒಂದು ವಿಭಾಗದ ಆತಂಕದ ಬಗ್ಗೆ ಕೇಳಿದಾಗ, “ಯಾವುದೇ ಮಹಿಳಾ ಕುಸ್ತಿಪಟುಗಳ ವಿರುದ್ಧ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement