ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ : ಅಮೆರಿಕದ ಕ್ಯಾಲಿಫೋರ್ನಿಯಾದ ಪ್ರಮುಖ ಹಿಂದೂ ದೇವಾಲಯವನ್ನು ಖಲಿಸ್ತಾನ್ ಪರ ಘೋಷಣೆಗಳು ಮತ್ತು ಭಾರತ ವಿರೋಧಿ ಗೀಚುಬರಹ ಬರೆದು ವಿರೂಪಗೊಳಿಸಿದ ಕುರಿತು ಭಾರತ ತನಿಖೆ ನಡೆಸುವಂತೆ ಒತ್ತಾಯಿಸಿದೆ.
ಹಿಂದೂ-ಅಮೆರಿಕನ್ ಫೌಂಡೇಶನ್‌ನಿಂದ X (ಹಿಂದೆ ಟ್ವಿಟರ್) ಚಿತ್ರಗಳನ್ನು ಹಂಚಿಕೊಂಡಾಗ ಘಟನೆ ಬೆಳಕಿಗೆ ಬಂದಿದೆ. ಫೋಟೋಗಳು ನೆವಾರ್ಕ್‌ನ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ ಅವರು, ಇಂತಹ ‘ಉಗ್ರರಿಗೆ’ ಜಾಗ ನೀಡಬಾರದು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ಈಗಾಗಲೇ ಅಮೆರಿಕ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಮಾತನಾಡಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಅವರು ಒತ್ತಿ ಹೇಳಿದರು.

“ನಾನು ಈ ಸುದ್ದಿಯನ್ನು ನೋಡಿದ್ದೇನೆ, ನಿಮಗೆ ತಿಳಿದಿರುವಂತೆ, ನಾವು ಈ ಬಗ್ಗೆ ಕಾಳಜಿ ವಹಿಸುತ್ತೇವೆ. ಭಾರತದ ಹೊರಗಿನ ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿ ಶಕ್ತಿಗಳಿಗೆ ಜಾಗ ಸಿಗಬಾರದು. ನಮ್ಮ ದೂತಾವಾಸವು (ಯುಎಸ್) ಸರ್ಕಾರ ಮತ್ತು ಅಲ್ಲಿನ ಪೊಲೀಸರಿಗೆ ಏನು ನಡೆದಿದೆ ಎಂಬುದರ ಕುರಿತು ದೂರು ಸಲ್ಲಿಸಿದೆ, ಮತ್ತು ಈ ವಿಷಯದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ನಂಬಲಾಗಿದೆ ಎಂದು ಜೈಶಂಕರ ಸುದ್ದಿಗಾರರಿಗೆ ತಿಳಿಸಿದರು.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಘಟನೆಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಇದು ಭಾರತೀಯ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಈ ಘಟನೆಯು ಭಾರತೀಯ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ. ನಾವು ಈ ವಿಷಯದಲ್ಲಿ ಅಮೆರಿಕ ಅಧಿಕಾರಿಗಳು ತ್ವರಿತ ತನಿಖೆ ನಡೆಸಬೇಕು ಮತ್ತು ವಿಧ್ವಂಸಕರ ವಿರುದ್ಧ ತ್ವರಿತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
ದೇವಸ್ಥಾನದ ಆಡಳಿತ ಮಂಡಳಿ ಪ್ರಕಾರ ಈ ಘಟನೆ ಗುರುವಾರ ರಾತ್ರಿ ನಡೆದಿದೆ.
“ದೇಗುಲದ ಹತ್ತಿರ ವಾಸಿಸುವ ಭಕ್ತರೊಬ್ಬರು ಕಟ್ಟಡದ ಹೊರ ಗೋಡೆಯ ಮೇಲೆ ಕಪ್ಪು ಶಾಯಿಯಲ್ಲಿ ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಗೀಚುಬರಹವನ್ನು ಮೊದಲು ನೋಡಿದ್ದಾರೆ ಮತ್ತು ತಕ್ಷಣ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಲಾಗಿದೆ” ಎಂದು ದೇವಸ್ಥಾನದ ವಕ್ತಾರ ಭಾರ್ಗವ ರಾವಲ್ ಹೇಳಿದ್ದಾರೆ
ನೆವಾರ್ಕ್ ಪೊಲೀಸರು ಈ ವಿಷಯವನ್ನು ತನಿಖೆ ನಡೆಸುತ್ತಿದ್ದಾರೆ, ಇದು ಉದ್ದೇಶಿತ ಕೃತ್ಯ ಎಂದು ಅವರು ನಂಬಿದ್ದಾರೆ.
ಹಿಂದೂ ದೇವಾಲಯವನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲಲ್ಲ, ಈ ಹಿಂದೆಯೂ ಇದೇ ರೀತಿಯ ಘಟನೆಗಳು ಅಮೆರಿಕ ಮತ್ತು ಕೆನಡಾದಲ್ಲಿ ಸಂಭವಿಸಿವೆ. ಖಲಿಸ್ತಾನ್ ಬೆಂಬಲಿಗರಿಂದ ಹೆಚ್ಚುತ್ತಿರುವ ಈ ತರಹದ ಚಟುವಟಿಕೆಗಳ ಬಗ್ಗೆ ಭಾರತವು ಈ ಹಿಂದೆ ಕಳವಳ ವ್ಯಕ್ತಪಡಿಸಿದೆ.

ಪ್ರಮುಖ ಸುದ್ದಿ :-   ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement