ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ.
10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಮಾಜಿ ಸಚಿವರಾದ ಮುರುಗೇಶ ನಿರಾಣಿ, ಭೈರತಿ ಬಸವರಾಜ, ರಾಜುಗೌಡ ನಾಯಕ ಹಾಗೂ ಎನ್. ಮಹೇಶ್, ಅನಿಲ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ ಮತ್ತು ಎಂ.ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಮಾಡಿದ್ದಾರೆ.

ರಾಜ್ಯ ಪ್ರಧಾನ ಕಾರ್ಯದರ್ಶಿಗಳು….
ರಾಜ್ಯಪ್ರಧಾನ ಕಾರ್ಯದರ್ಶಿಗಳಾಗಿ ವಿ.ಸುನೀಲಕುಮಾರ, ಪಿ.ರಾಜೀವ, ಎನ್.ಎಸ್.ನಂದೀಶ ರೆಡ್ಡಿ ಹಾಗೂ ಜೆ.ಪ್ರೀತಂ ಗೌಡ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿಗಳು…
ಬೀದರಿನ ಶೈಲೇಂದ್ರ ಬೆಲ್ದಾಳೆ, ಶಿವಮೊಗ್ಗ ಡಿ.ಎಸ್ ಅರುಣ, ಕಲಬುರಗಿಯ ಬಸವರಾಜ ಮತ್ತಿಮೋಡ, ಚಿಕ್ಕಬಳ್ಳಾಪುರದ ಸಿ ಮುನಿರಾಜು, ತುಮಕೂರಿನ ವಿನಯ ಬಿದರೆ, ಮಂಗಳೂರಿನ ಕ್ಯಾಪ್ಟನ್ ಬ್ರಿಜೇಶ ಚೌಟ, ಕೊಪ್ಪಳದ ಶರಣು ತಳ್ಳಕೇರಿ, ಯಾದಗಿರಿಯ ಲಲಿತಾ ಅನಾಪುರ, ಮಂಡ್ಯದ ಲಕ್ಷ್ಮೀ ಅಶ್ವಿನ್ ಗೌಡ, ತುಮಕೂರಿನ ಅಂಬಿಕಾ ಹುಲಿನಾಯ್ಕರ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯ ಖಚಾಂಚಿಯಾಗಿ ಬೆಂಗಳೂರಿನ ಸುಬ್ಬ ನರಸಿಂಹ ಅವರನ್ನು ಮುಂದುವರಿಸಲಾಗಿದೆ. (ಪದಾಧಿಕಾರಿಗಳ ಪಟ್ಟಿಯ ನೋಡಲು state-office-bearers-  ಇಲ್ಲಿ ಕ್ಲಿಕ್‌ ಮಾಡಬಹುದು

ಪ್ರಮುಖ ಸುದ್ದಿ :-   ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಸಿಸ್ ಭಯೋತ್ಪಾದಕರ ಬಂಧನ

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು
ಇದೇ ವೇಳೆ ವಿವಿಧ ಮೋರ್ಚಾಗಳಿಗೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ ಮುನಿರಾಜು, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ, ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್.ಪಾಟೀಲ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement