ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ವಿಪಕ್ಷ ನಾಯಕ, ಅರವಿಂದ ಬೆಲ್ಲದಗೂ ಮಹತ್ವದ ಹೊಣೆ

ಬೆಂಗಳೂರು :ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ ಪ್ರಕಾಶ (ಜೆ.ಪಿ) ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.
ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಉಪ ನಾಯಕರನ್ನಾಗಿ ಸುನೀಲ ವಲ್ಯಾಪುರೆ, ವಿಧಾನಸಭೆಯ ಮುಖ್ಯ ಸಚೇತಕರಾಗಿ ಶಾಸಕ ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ ಅವರನ್ನು ನೇಮಕ ಮಾಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...| 'ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ' ಎಂದ ಕಾಂಗ್ರೆಸ್‌ ಹಿರಿಯ ನಾಯಕ...! ಟಿಎಂಸಿ ಕೆಂಡ

ನಿಮ್ಮ ಕಾಮೆಂಟ್ ಬರೆಯಿರಿ

advertisement