ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ.
ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜವನ್ನೂ ಕೊಟ್ಟರು, ಗೊಬ್ಬರವನ್ನೂ ಕೊಟ್ಟರು. ಇನ್ನೂ ರೈತರಿಗೆ ಒಂದೆ ಆಸೆ ಇದೆ ಏನಪ್ಪಾ ಎಂದರೆ, ಮ್ಯಾಲ ಮ್ಯಾಲ ಬರಗಾಲ ಬೀಳಲಿ ಎಂದು. ಏಕೆಂದರೆ, ಸಾಲ ಮನ್ನಾ ಆಗುತ್ತದೆ ಎಂದು ಅವರು ಬಯಸುತ್ತಾರೆ. ಈ ರೀತಿಯಾಗಿ ಬಯಸಬಾರದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದರೆ, ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಶಿವಾನಂದ ಪಾಟೀಲ ವಿವಾದಾದ್ಮಕ ಹೇಳಿಕೆ ನೀಡಿದ್ದರು., ಕುಡಿದು ಸತ್ತರೂ, ಹೃದಯಾಘಾತದಿಂದ ಸತ್ತರೂ ಆತ್ಮಹತ್ಯೆ ಎಂದು ದೂರು ಕೊಟ್ಟರೆ ಪರಿಹಾರ ಸಿಗುತ್ತೆ ಎನ್ನುವ ದುರಾಸೆ ಸಂಬಂಧಿಕರಿಗಿದೆ. ನಾವು 2015 ರಲ್ಲಿ ಐದು ಲಕ್ಷ ಪರಿಹಾರ ಕೊಡಲು ಶುರು ಮಾಡಿದ್ದೇವೆ. ಅವತ್ತಿನಿಂದ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ ಎಂದು ಅವರು ಹೇಳಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement