ಫೆಬ್ರವರಿ 2ರಿಂದ ಮೂರು ದಿನ ನಡೆಯಲಿದೆ ಹಂಪಿ ಉತ್ಸವ ; ಸಚಿವ ಜಮೀರ್ ಅಹಮದ್

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಫೆಬ್ರವರಿ 2ರಂದು ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃ ತಿಕ ಕಲೆಗಳಿಗೆ ಒತ್ತು ನೀಡುವಂತೆ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃ ತಿಕ ವಲಯದವರನ್ನು ಜೊತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ನಡೆಸಲಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement