ಕರ್ನಾಟಕದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಬುಧವಾರ ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ ಶೇ. 1.41 ರಷ್ಟು ಇದೆ. ಬೆಂಗಳೂರಿನಲ್ಲಿ 2,321 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ 80 ಮಂದಿಗೆ ಸೋಂಕು ದೃಢಪಟ್ಟಿದೆ.
ಶಿವಮೊಗ್ಗ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಪ್ರಕರಣ, ವಿಜಯಪುರದಲ್ಲಿ 1. ತುಮಕೂರಿನಲ್ಲಿ 1, ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 422 ಮಂದಿ ಮನೆ ಆರೈಕೆಗೆ ಒಳಗಾದರೆ, 57 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 19 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 38 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. ಸೋಂಕಿತರಲ್ಲಿ 87 ಮಂದಿ ಬುಧವಾರ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement