ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ.
ರಾಹುಲ್ ಗಾಂಧಿಯವರ ಭಾರತ ನ್ಯಾಯ ಯಾತ್ರೆಯ ಸಂದರ್ಭದಲ್ಲಿ 14 ರಾಜ್ಯಗಳ 85 ಜಿಲ್ಲೆಗಳನ್ನು ಕ್ರಮಿಸಲಿದೆ. ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ, ಒಡಿಶಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದ ರಾಜ್ಯಗಳಲ್ಲಿ ಯಾತ್ರೆ ಸಾಗಲಿದ್ದು, 6,200 ಕಿಲೋಮೀಟರ್‌ಗಳ ಯಾತ್ರೆ ನಡೆಯಲಿದೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಜನವರಿ 14 ರಂದು ಮಣಿಪುರದಿಂದ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಜನರಿಗೆ ಗರಿಷ್ಠ ಲಭ್ಯತೆ ನೀಡುವ ಉದ್ದೇಶದಿಂದ ಭಾರತ ನ್ಯಾತ ಯಾತ್ರೆಗೆ ಬಸ್ಸುಗಳು ಪ್ರಯಾಣದ ವಿಧಾನವಾಗಿರುತ್ತವೆ. ಮೆರವಣಿಗೆಯ ಸಮಯದಲ್ಲಿ ಅಲ್ಪಾವಧಿಯ ನಡಿಗೆ ಇರುತ್ತದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement