ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ : ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೊಬ್ಬರಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಮಿಲ್ಲಿಂಗ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲಿಗೆ 11,160 ರೂ.ಗಳೆಂದು ನಿಗದಿ ಪಡಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 300 ರೂ. ಹೆಚ್ಚಿಸಲಾಗಿದೆ. ಅಂತೆಯೇ, ಚೆಂಡು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ 12,000 ರೂ.ಗಳನ್ನು ನಿಗದಿ ಪಡಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 250 ರೂ.ಗಳನ್ನು ಹೆಚ್ಚಿಸಲಾಗಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಈ ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ನಿರ್ಧಾರದಿಂದ ತೆಂಗು ಬೆಳೆಗಾರರಿಗೆ ಉತ್ತಮ ಆದಾಯವನ್ನು ಖಚಿತಪಡಿಸುತ್ತದೆ ಎಂದು ಹೇಳಿದರು.
ಕೇರಳ ಮತ್ತು ತಮಿಳುನಾಡು ಮಿಲ್ಲಿಂಗ್ ಕೊಬ್ಬರಿಯ ಪ್ರಮುಖ ಉತ್ಪಾದಕ ರಾಜ್ಯಗಳಾಗಿದ್ದು, ಕರ್ನಾಟಕದಲ್ಲಿ ಚೆಂಡು ಕೊಬ್ಬರಿಯನ್ನು ಪ್ರಧಾನವಾಗಿ ಉತ್ಪಾದಿಸಲಾಗುತ್ತದೆ.
2023 ರ ಋತುವಿನಲ್ಲಿ, ಕೇಂದ್ರ ಸರ್ಕಾರವು 1,493 ಕೋಟಿ ರೂಪಾಯಿ ವೆಚ್ಚದಲ್ಲಿ 1,33,000 ಮೆಟ್ರಿಕ್ ಟನ್ ಕೊಪ್ಪಬರಿಯನ್ನು ಖರೀದಿಸಿದೆ. ಇದು ಹಿಂದಿನ ಋತುವಿಗಿಂತ 227% ರಷ್ಟು ಏರಿಕೆ ದಾಖಲಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement