ಮೈಸೂರಿನ ಶಿಲ್ಪಿ ಅರುಣ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ….

ಮೈಸೂರು : 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ.
ಮೈಸೂರಿನ ಅರುಣ ಯೋಗಿರಾಜ ಅವರು ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಕಾಯಕ ದಕ್ಕಿದ್ದು, ಜನವರಿ 22ರಂದು ರಾಮಲಲ್ಲಾ ಮೂರ್ತಿ ಲೋಕಾರ್ಪಣೆಯಾಗಲಿದೆ. ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಕೂಡ ಪ್ರತ್ಯೇಕ ಮೂರ್ತಿ ಕೆತ್ತನೆ ಮಾಡಿದ್ದಾರೆ.

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕು ಕೃಷ್ಣಶಿಲೆಯಲ್ಲಿ ಮೂರ್ತಿ ನಿರ್ಮಾಣ ಕಾರ್ಯ ಮಾಡಲಾಗಿದ್ದು, ರಾಮಲಲ್ಲಾ ಮೂರ್ತಿ ಅಡಿಯಿಂದ ಹಣೆಯವರೆಗೆ 51 ಇಂಚು ಎತ್ತರವಿದ್ದು, ಪ್ರತಿಮೆಯು “ಪ್ರಭಾವಳಿ” ಸೇರಿದಂತೆ ಎಂಟು ಅಡಿ ಎತ್ತರ ಮೂರೂವರೆ ಅಡಿ ಅಗಲ ಹೊಂದಿದೆ. ಪ್ರತಿಮೆಯನ್ನು ಪೂರ್ಣಗೊಳಿಸಲು ಆರು ತಿಂಗಳು ತೆಗೆದುಕೊಂಡಿದ್ದಾರೆ. ಬಿಲ್ಲು ಮತ್ತು ಬಾಣವನ್ನು ಹಿಡಿದಿರುವ ಭಗವಾನ್ ರಾಮ, ಮೂರು ಪ್ರತಿಮೆಗಳಲ್ಲಿ ಒಂದನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಅಂತಿಮವಾಗಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ರಾಮಮಂದಿರ ನಿರ್ಮಾಣ ಸಮಿತಿ ಮೂರ್ತಿಯನ್ನು ಆಯ್ಕೆ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ರಾಮಲಲ್ಲಾ ಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

ಉದ್ಘಾಟನೆಗೆ ಅರುಣ ಅವರನ್ನು ಆಹ್ವಾನಿಸಲಾಗಿದೆ. ಅರುಣ ಅವರು ಎಂಬಿಎ ಪದವೀಧರರಾಗಿದ್ದು, ಐದನೇ ತಲೆಮಾರಿನ ಶಿಲ್ಪಿಯಾಗಿದ್ದಾರೆ. 40 ವರ್ಷದ ಅರುಣ ಅವರು 2008ರಿಂದ ಈವರೆಗೆ 1,000 ಕ್ಕೂ ಹೆಚ್ಚು ಪ್ರತಿಮೆಗಳನ್ನು ಸಿದ್ಧಪಡಿಸಿದ್ದಾರೆ. ಉದ್ಘಾಟನೆಗೆ ಅರುಣ ಅವರನ್ನು ಆಹ್ವಾನಿಸಲಾಗಿದೆ.
ಈ ಹಿಂದೆ ಕೆತ್ತನೆ ಮಾಡಿದ್ದ ಶಂಕರಾಚಾರ್ಯರ ಪ್ರತಿಮೆ, ಸುಭಾಷಚಂದ್ರ ಬೋಸ್ ಪ್ರತಿಮೆಗಳು ಪ್ರಮುಖವಾದದ್ದು. ಅಯೋಧ್ಯೆ ರಾಮಮಂದಿರಕ್ಕೆ ಶ್ರೀರಾಮನ ಮೂರ್ತಿ ಕೆತ್ತುವ ಅವಕಾಶ ಸಿಕ್ಕಿದ್ದು ಬಹಳ ಸಂತೋಷ ತಂದಿದೆ ಎಂದು ಅರುಣ ಯೋಗಿರಾಜ ಸಂತಸ ವ್ಯಕ್ತಪಡಿಸಿದ್ದಾರೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement