ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ.
ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಮಂಗಳವಾರ ಸಂಸದ ಪ್ರತಾಪ ಸಿಂಹ ಕಚೇರಿ ಮುಂದೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಎಫ್ಐಆರ್ ದಾಖಲಿಸುವ ಭರವಸೆ ನೀಡಿದ ಬಳಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯನ್ನ ಹಿಂಪಡೆದಿದ್ದರು.
ಪ್ರತಾಪ ಸಿಂಹ ಅವರಿಂದ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು
ಮೈಸೂರು ಗ್ರಾಮಾಂತರ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ ವಿಜಯಕುಮಾರ ಎಂಬವರು ಲಿಖಿತ ದೂರು ನೀಡಿದ್ದಾರೆ. ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ ಸಿಂಹ ವಿರುದ್ಧ 1860 ರ IPC 504 , 153ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement