ಬೆಂಗಳೂರು : ರಾಜ್ಯ ಸರ್ಕಾರ ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಪರ್ಣಾ ರಮೇಶ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ನರ್ವಾಡೆ ವಿನಾಯಕ ಕರ್ಭಾರಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಕನಿಷ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಉಪವಿಭಾಗದ ಸಹಾಯಕ ಆಯುಕ್ತರಾಗಿ, ಜುಬಿನ್ ಮೊಹಾಪಾತ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಹಾಗೂ ದಲ್ಜೀತಕುಮಾರ ಅವರನ್ನು ಚಿಕ್ಕಮಗಳೂರು ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಯತೀಶ್ ಆರ್. ಅವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ಮೊಹಮ್ಮದ್ ಹ್ಯಾರಿಸ್ ಸುಮೈರ್ ಅವರನ್ನು ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ ಹಾಗೂ ನೇಮಕಾತಿಗಾಗಿ ಕಾಯುತ್ತಿದ್ದ ರೂಪಿಂದರ್ ಕೌರ್ ಅವರನ್ನು ಕಲಬುರಗಿ ಉಪವಿಭಾಗದ ಸಹಾಯಕ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ