ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಶಿವಸೇನೆಯ 23 ಸ್ಥಾನಗಳ ಬೇಡಿಕೆ ತಿರಸ್ಕರಿಸಿದ ಕಾಂಗ್ರೆಸ್‌

ಮುಂಬೈ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ನೀಡಬೇಕು ಎಂಬ ಮಿತ್ರಪಕ್ಷ ಶಿವಸೇನೆಯ (ಉದ್ಧವ್‌ ಠಾಕ್ರೆ ಶಿವಸೇನೆ) ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ.
ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ (ಯುಬಿಟಿ) ನಾಯಕರು ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ.
ಶಿವಸೇನೆಯು ಎರಡು ಬಣಗಳಾಗಿ ಒಡೆದು ಹೋಗಿದೆ ಬಹುಪಾಲ ಶಿವಸೇನೆ ಸಂಸದರು ಮುಖ್ಯಮಂತ್ರಿ ಏಕನಾಥ ಶಿಂದೆಯವರ ಶಿವಸೇನೆ ಪಕ್ಷದಲ್ಲಿದ್ದಾರೆ. ಆದರೂ ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 23 ಸ್ಥಾನಗಳನ್ನು ನೀಡಬೇಕು ಎಂದು ಉದ್ಧವ್‌ ಠಾಕ್ರೆ ಶಿವಸೇನೆ ಹಕ್ಕು ಪ್ರತಿಪಾದಿಸಿದೆ. ಪಕ್ಷದ ವಿಭಜನೆಯಿಂದಾಗಿ ಸಾಕಷ್ಟು ಅಭ್ಯರ್ಥಿಗಳ ಕೊರತೆಯಿಂದಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಮಹತ್ವದ ಸವಾಲನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಂಜಯ ನಿರುಪಮ ಹೇಳಿದ್ದಾರೆ.

ಶಿವಸೇನೆ ಮತ್ತು ಶರದ್ ಪವಾರ್ ಅವರ ಎನ್‌ಸಿಪಿಯಲ್ಲಿನ ಭಿನ್ನಾಭಿಪ್ರಾಯಗಳ ನಂತರ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಸ್ಥಿರವಾದ ಮತ ಹಂಚಿಕೆಯನ್ನು ಹೊಂದಿರುವಂತೆ ತೋರುತ್ತಿದೆ ಎಂದು ಸಭೆಯಲ್ಲಿ ಕಾಂಗ್ರೆಸ್ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ.
ಪಕ್ಷಗಳ ನಡುವೆ ಹೊಂದಾಣಿಕೆಯ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ಅಶೋಕ ಚವ್ಹಾಣ ಹೇಳಿದ್ದಾರೆ. “ಪ್ರತಿ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಬಯಸುತ್ತಿರುವಾಗ, ಶಿವಸೇನೆಯ 23 ಸ್ಥಾನಗಳ ಬೇಡಿಕೆ ಇಟ್ಟಿರುವುದು ಪ್ರಸ್ತುತ ಪರಿಸ್ಥಿತಿಗಳನ್ನು ಗಮನಿಸಿದರೆ ವಿಪರೀತ ” ಎಂದು ಅವರು ಹೇಳಿದ್ದಾರೆ.
ಸೀಟು ಗೆಲ್ಲುವ ವಿಚಾರದಲ್ಲಿ ನಾಯಕರು ಸಂಘರ್ಷಗಳನ್ನು ತಪ್ಪಿಸಬೇಕು ಎಂದು ಸಂಜಯ ನಿರುಪಮ ಹೇಳಿದ್ದಾರೆ. “ಶಿವಸೇನೆಯು 23 ಸ್ಥಾನಗಳಿಗೆ ಬೇಡಿಕೆ ಇಡಬಹುದು, ಆದರೆ ಅವರು ಅವರನ್ನು ಏನು ಮಾಡುತ್ತಾರೆ? ಅಭ್ಯರ್ಥಿಗಳ ಕೊರತೆ ಶಿವಸೇನೆಗೆ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ...!

ಕಳೆದ ವಾರ, ಶಿವಸೇನೆ (ಯುಬಿಟಿ) ಸಂಸದ ಸಂಜಯ ರಾವತ್ ಅವರು ಪಕ್ಷದ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಅವರು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿ ಸ್ಪರ್ಧಿಸುವ ಸ್ಥಾನಗಳ ಬಗ್ಗೆ ರಾವತ್ ಏನನ್ನೂ ಹೇಳಲಿಲ್ಲ.
2019ರಲ್ಲಿ ಅವಿಭಜಿತ ಶಿವಸೇನೆಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿತ್ತು. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಈಗ ಕಾಂಗ್ರೆಸ್ ಮತ್ತು ಎನ್‌ಸಿಪಿಯನ್ನು ಒಳಗೊಂಡಿರುವ ಎಂವಿಎಯ ಭಾಗವಾಗಿದೆ.
ಜೂನ್ 2022 ರಲ್ಲಿ, ಏಕನಾಥ ಶಿಂಧೆ ಮತ್ತು ಇತರ 40 ಶಾಸಕರು ಶಿವಸೇನೆ ನಾಯಕತ್ವದ ವಿರುದ್ಧ ಬಂಡಾಯವೆದ್ದರು, ಇದು ಪಕ್ಷದ ವಿಭಜನೆಗೆ ಕಾರಣವಾಯಿತು ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (MVA) ಸರ್ಕಾರದ ಪತನಕ್ಕೆ ಕಾರಣವಾಯಿತು. ನಂತರ ರಾಜ್ಯದಲ್ಲಿ ಸರ್ಕಾರ ರಚಿಸಲು ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು.

ಪ್ರಮುಖ ಸುದ್ದಿ :-   ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ : ಶೇ.95.6 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿ..

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement