ಕರ್ನಾಟಕದಲ್ಲಿ ಗುರುವಾರ 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದೇವೇಳೆ 69 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568ಕ್ಕೆ ತಲುಪಿದೆ. 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 14 ಸೋಂಕಿತರು ಐಸಿಯುನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 8,350 ಪರೀಕ್ಷೆ ಮಾಡಲಾಗಿದೆ. ಕೋವಿಡ್ ಧನಾತ್ಮಕತೆ ದರ ಶೇ. 1.89 ರಷ್ಟಿದ್ದು, ಮರಣ ದರ ಶೇ 0.00 ಆಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ 85 ಪ್ರಕರಣ ದಾಖಲಾಗಿದ್ದು, 414 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಬೀದರ 1, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ದಕ್ಷಿಣ ಕನ್ನಡದಲ್ಲಿ 8, ಧಾರವಾಡ 2, ಗದಗ 2, ಹಾಸನ 2 , ಕಲಬರುಗಿ 1 ಹಾಗೂ ಕೋಲಾರದಲ್ಲಿ 3 ಪ್ರಕರಣ ದೃಢಪಟ್ಟಿದೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement