ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತುಮಕೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ಕಾರು ಅಪಘಾತವಾಗಿದ್ದು, ಸಚಿವರಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಬರುವಾಗ ಗುರುವಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಮಧು ಬಂಗಾರಪ್ಪ ಕಾರು ಹಾಗೂ ಲಾರಿ ಡಿಕ್ಕಿಯಾಗಿದೆ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿಗೆ ಬರುತ್ತಿದ್ದರು. ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಅಪಘಾತದ ಬಳಿಕ ಸಚಿವರು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement