ಅಸಮಾಧಾನಿತ ಶಾಸಕರಿಗೆ ವಿಶೇಷ ಹುದ್ದೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ : ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಕಳೆದ ಕೆಲವು ತಿಂಗಳಿಂದ ರೆಬೆಲ್‌ ಶಾಸಕರಾಗಿದ್ದ ಇಬ್ಬರು ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಹುದ್ದೆಯನ್ನೇ ಸೃಷ್ಟಿಸಿದ್ದಾರೆ. ಇನ್ನೊಬ್ಬ ಹಿರಿಯ ನಾಯಕರಿಗೆ ಮಹತ್ವದ ಹುದ್ದೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ ರಾಯರೆಡ್ಡಿ (Basavaraja RayaReddy) ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಅಳಂದ ಕ್ಷೇತ್ರದ ಶಾಸಕರಾಗಿರುವ ಬಿ.ಆರ್‌. ಪಾಟೀಲ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಜೊತೆಗೆ ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಹಿರಿಯ ರಾಜಕಾರಣಿ ಆರ್‌.ವಿ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಇದು ಸಂಪುಟ ದರ್ಜೆ ಸ್ಥಾನಮಾನವಾಗಿದೆ.

ಬಸವರಾಜ ರಾಯರೆಡ್ಡಿ ‌ ಮತ್ತು ಬಿ.ಆರ್‌ ಪಾಟೀಲ ಅವರು ತಮ್ಮದೇ ಸರಕಾರದ ಸಚಿವರ ಕಾರ್ಯವೈಖರಿ ಪ್ರಶ್ನಿಸಿದ್ದರು. ಬಸವರಾಜ ರಾಯರೆಡ್ಡಿ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಕೂಡಾ ರಾಯರೆಡ್ಡಿ ತಿರಸ್ಕರಿಸಿದ್ದರು. ಇಬ್ಬರೂ ಸಚಿವ ಹುದ್ದೆಯ ಆಕಾಂಕ್ಷಿಗಳಾಗಿದ್ದವರು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಈಗ ಅವರಿಗಾಗಿ ವಿಶೇಷ ಹುದ್ದೆಯನ್ನೇ ಸೃಷ್ಟಿಸಿ ಅವರನ್ನು ಸಮಾಧಾನ ಪಡಿಸಲು ಮುಂದಾಗಿದ್ದಾರೆ.
ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ ದೇಶಪಾಂಡೆ ಅವರಿಗೆ ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷರ ಸ್ಥಾನಮಾನ ನೀಡಲಾಗಿದೆ. ಆರ್‌.ವಿ. ದೇಶಪಾಂಡೆ ಅವರು ಕೂಡಾ ಸಿದ್ದರಾಮಯ್ಯ ಆಪ್ತರೆ. ಆದರೆ, ವಯಸ್ಸು ಮತ್ತು ಒತ್ತಡವನ್ನು ಪರಿಗಣಿಸಿ ಅವರಿಗೆ ಸಂಪುಟದಲ್ಲಿ ಹುದ್ದೆ ಸಿಕ್ಕಿರಲಿಲ್ಲ. ಅದಕ್ಕೆ ಪ್ರತಿಯಾಗಿ ಈಗ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement