ಚಿತ್ರದುರ್ಗ : ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆ

ಚಿತ್ರದುರ್ಗ : ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ಮಾರ್ಗದ ಜೈಲ್ ರಸ್ತೆಯ ಪಾಳು ಬಿದ್ದ ಮನೆಯೊಂದರಲ್ಲಿ ಈ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಮೊದಲು ಮೂರು ಅಸ್ಥಿಪಂಜರಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ನಂತರ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಐದು ಅಸ್ಥಿಪಂಜರಗಳು ಪತ್ತೆಯಾಗಿದೆ ಎನ್ನಲಾಗಿದೆ.
ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರಗಳು ಪತ್ತೆಯಾದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್‌ ಅಧಿಕಾರಿಗಳಾದ ಸ್ಥಳಕ್ಕೆ ಡಿವೈಎಸ್‌ಪಿ ಅನಿಲಕುಮಾರ, ಸಿಪಿಐ ನಹಿಂ ಅಹಮದ್ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಮತ್ತು ಅವರ ಕುಟುಂಬ ಆ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮ, ಪುತ್ರರಾದ ಕೃಷ್ಣರೆಡ್ಡಿ, ನರೇಂದ್ರ ರೆಡ್ಡಿ, ಮಗಳು ತ್ರಿವೇಣಿ ಇದ್ದರು. ಈ ಸಂಬಂಧ ಸಂಬಂಧಿಕರಾದ ಪವನಕುಮಾರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಯಾರಿಗೂ ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರದೇ ಅಸ್ಥಿಪಂಜರ ಆಗಿರಬಹುದು. ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆ ಆಗಿವೆ. ಮೂರ್ನಾಲ್ಕು ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು. ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರು ದಾಖಲು ಮಾಡಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಜಗನ್ನಾಥ ರೆಡ್ಡಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಯಾರೊಂದಿಗೂ ಸಂಪರ್ಕವಿರಲಿಲ್ಲ ಎನ್ನಲಾಗಿದೆ. 2019ರಲ್ಲಿ ದೊಡ್ಡ ಸಿದ್ದವ್ವನಹಳ್ಳಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು 2 ಕೋಟಿ ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರಂತೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಸಂಪೂರ್ಣ ಕುಟುಂಬ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲವಂತೆ. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೇ ಕಿಟಕಿಯಲ್ಲಿ ಮಾತನಾಡಿಸಿ ಕಳುಹಿಸುತ್ತಿದ್ದರು ಎನ್ನಲಾಗಿದೆ.
ಗುರುವಾರ ರಾತ್ರಿ ಪರಿಶೀಲಿಸಿದ್ದ ಪೊಲೀಸರು ಮೂರು ಅಸ್ಥಿಪಂಜರ ದೊರೆತಿವೆ ಎಂದು ತಿಳಿಸಿದ್ದರು. ಆದರೆ ಬೆಳಗ್ಗೆ ಐದು ಅಸ್ತಿ ಪಂಜರ ಪತ್ತೆಯಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಸ್ಥಳ ಪರಿಶೀಲಿಸಿದ್ದು, ಅಸ್ಥಿ ಪಂಜರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ‌.
ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಅಸ್ಥಿಪಂಜರಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement