ಶಿರಸಿ : ಫೆ.22ರಂದು ಸ್ವರ್ಣವಲ್ಲೀ ಶ್ರೀಗಳಿಂದ ನೂತನ ಶಿಷ್ಯ ಸ್ವೀಕಾರ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಶ್ರೀಮಠದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮ ಫೆಬ್ರವರಿ 22 ರಂದು ನಡೆಯಲಿದೆ.
ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಶಿಷ್ಯರ ಸ್ವೀಕಾರಕ್ಕೆ ತೀರ್ಮಾನಿಸಿ, ನೇಮಕಗೊಳಿಸಿದ್ದಾರೆ.
ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರ ಅಪೇಕ್ಷೆ, ಆದೇಶ ಮತ್ತು ಜ್ಯೋತಿಷಿಗಳ ಸಲಹೆಗೆ ಮೇರೆಗೆ ಯಲ್ಲಾಪುರ ತಾಲೂಕಿನ ಈರಾಪುರದ ವಿದ್ವಾನ್ ನಾಗರಾಜ ಭಟ್ಟ ಅವರನ್ನು ಶ್ರೀಗಳವರ ಶಿಷ್ಯರನ್ನಾಗಿ ಸ್ವೀಕರಿಸಲು ತೀರ್ಮಾನಿಸಲಾಗಿದೆ. ಡಿಸೆಂಬರ್‌ 25 ರಂದು ನಡೆದ ಶ್ರೀಮಠದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಣಯಿಸಲಾಗಿದೆ. ಶ್ರೀಗಳ ಶಿಷ್ಯ ಸ್ವೀಕಾರದ (ಸನ್ಯಾಸಾಶ್ರಮದ) ಕಾರ್ಯಕ್ರಮ ಮಾಘ ಶುದ್ಧ ತ್ರಯೋದಶಿ (ಫೆಬ್ರವರಿ 22) ಗುರುವಾರದಂದು ನಡೆಯಲಿದೆ‌ ಎಂದು ಮಠದ ಆಡಳಿತ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆಧ್ಯಾತ್ಮ, ಧಾರ್ಮಿಕ, ಸಮಾಜಮುಖಿ, ಶೈಕ್ಷಣಿಕ, ಪರಿಸರದ ಸಂರಕ್ಷಣೆ, ಭಗವದ್ಗೀತಾ ಅಭಿಯಾನದಲ್ಲಿ ಮುಂಚೂಣಿಯಲ್ಲಿರುವ ಸ್ವರ್ಣವಲ್ಲೀ ಶ್ರೀಗಳ ಅಪೇಕ್ಷೆ ಹಾಗೂ ಸೂಚನೆಯಂತೆ ಕಳೆದ ಹಲವು ವರ್ಷಗಳಿಂದ ಶಿಷ್ಯರ ಹುಡುಕಾಟ ನಡೆದಿತ್ತು. ಜೋತಿಷ್ಯರ ಸಲಹೆ, ಸೂಚನೆ ಪಡೆದು ಯಲ್ಲಾಪುರ ತಾಲೂಕಿನ ಈರಾಪುರ ತಾಲೂಕಿನ ಗಂಗೇಮನೆಯ ವಿದ್ವಾನ್ ನಾಗರಾಜ್ ಭಟ್ಟ ಅವರನ್ನು ಶ್ರೀಗಳ ಶಿಷ್ಯರಾಗಿ ಸ್ವೀಕರಿಸಲು ತೀರ್ಮಾನಿಸಲಾಗಿದೆ.
ಸ್ವರ್ಣವಲ್ಲೀ ಮಠದಲ್ಲೇ ಕಳೆದ ಒಂದು ದಶಕಗಳಿಂದ ವೇದಾಧ್ಯಯನ ನಡೆಸಿ, ಈಗ ವೇದಾಂತ ಶಾಸ್ತ್ರ ಅಧ್ಯಯನ ಮಾಡುತ್ತಿರುವ ೨೩ರ ವರ್ಷ ವಯಸ್ಸಿನ ನಾಗರಾಜ ಭಟ್ಟ ಅವರು ಗಣಪತಿ ಭಟ್ಟ ಹಾಗೂ ಭುವನೇಶ್ವರಿ ಅವರ ಪ್ರಥಮ ಪುತ್ರರು. ನಾಗರಾಜ ಭಟ್ಟ ಅವರನ್ನು ಶ್ರೀಗಳ ಶಿಷ್ಯರನ್ನಾಗಿ ಸ್ವೀಕರಿಸಲು ಕಳೆದ ಡಿಸೆಂಬರ್‌ 25 ರಂದು ನಡೆದ ಆಡಳಿತ ಮಂಡಳಿ ಸಭೆ ಕೂಡ ನಿರ್ಣಯಿಸಿ ಸಮ್ಮತಿಸಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಮೂಲತಃ ಈರಾಪುರ ಗಂಗೆಮನೆಯ ಕೃಷಿ ಕುಟುಂಬದ ನಾಗರಾಜ ಭಟ್ಟ ಅವರಿಗೆ ಮೊದಲಿಂದಲೂ ಆಧ್ಯಾತ್ಮದ ಆಸಕ್ತಿ ಇತ್ತು. ಸ್ವರ್ಣವಲ್ಲೀ ಮಠದಲ್ಲೀ ಅತ್ಯಂತ ಆಸ್ಥೆಯಿಂದ ವೇದಾಧ್ಯಯನ, ವೇದಾಂತ ಶಾಸ್ತ್ರ ಅಧ್ಯಯನ ಮಾಡುತ್ತಿದ್ದು, ನಾಗರಾಜ ಭಟ್ಟ ಅವರ ಕುಂಡಲಿಯನ್ನೂ ಮೂರು ಪ್ರಮುಖ ಜೋತಿಷ್ಯ ರತ್ನರ ಮೂಲಕ ಪರಿಶೀಲಿಸಿ ಒಪ್ಪಿಗೆ ಪಡೆದು ನೇಮಕ ಮಾಡಲಾಗಿದೆ. ನಾಗರಾಜ ಭಟ್ಟ ಅವರ ಸಹೋದರ ಉಡುಪಿಯಲ್ಲಿ ಜೋತಿಷ್ಯ ಶಾಸ್ತ್ರ ಅಧ್ಯಯನ ನಡೆಸುತ್ತಿದ್ದಾರೆ.
ಶಿಷ್ಯ ಸ್ವೀಕಾರದ ಕಾರ್ಯಕ್ರಮ ಮಾಘ ಶುದ್ಧ ತ್ರಯೋದಶಿ ಫೆಬ್ರವರಿ 22ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement