ಮರಗಳ್ಳತನ ಆರೋಪ: ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಅರಣ್ಯಾಧಿಕಾರಿಗಳ ವಶಕ್ಕೆ

ಬೆಂಗಳೂರು : ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
.ಹಾಸನ ಜಿಲ್ಲೆಯ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.
ನಂದಗೋಡನಹಳ್ಳಿಯಲ್ಲಿ ತಾವು ಲೀಸ್‌ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು ಅವುಗಳನ್ನು ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ಆನಂತರ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅರಣ್ಯ ಇಲಾಖೆಯ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಬೇಕಿದೆ.

ಅಕ್ರಮವಾಗಿ ಕಡಿದಿರುವ ಆರೋಪದ ಮೇರೆಗೆ ಅವರ ವಿರುದ್ಧ ಅರಣ್ಯಾಧಿಕಾರಿಗಳು ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ಆಧರಿಸಿ ಅವರನ್ನು ವಶಕ್ಕೆ ಪಡೆಯಲು ವಿಕ್ರಂ ಅವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದರು. ಅವರು ಬೆಂಗಳೂರಿನಲ್ಲಿ ಇರುವ ಕುರಿತಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ಸಿಕ್ಕ ನಂತರ ಅವರನ್ನು ವಶಕ್ಕೆ ಪಡೆದಿದ್ದರು. ನಂತರ ಅವರನ್ನು ಬೆಂಗಳೂರಿನ ಜಾರುಬಂಡೆ ಕಾವಲ್‌ನಲ್ಲಿರುವ ಅರಣ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ವಿಚಾರಣೆ ಬಳಿಕ ಇದೀಗ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

 

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement