ಕರ್ನಾಟಕದಲ್ಲಿ ಶನಿವಾರ 201 ಮಂದಿಗೆ ಕೋವಿಡ್‌ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 201 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಹಾಗೂ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಶನಿವಾರ ರಾಜ್ಯದಲ್ಲಿ 7060 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಧನಾತ್ಮಕತೆ ಪ್ರಮಾಣ ಶೇ. 2.84 ರಷ್ಟು ಇದೆ. ಬೆಂಗಳೂರಿನಲ್ಲಿ 2095 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ 69 ಮಂದಿಗೆ ಸೋಂಕು ದೃಢಪಟ್ಟಿದೆ. ಮೈಸೂರಿನಲ್ಲಿ ಒಂದು ಸಾವು ಸಂಭವಿಸಿದೆ.
ಸೋಂಕಿತರಲ್ಲಿ 783 ಮಂದಿ ಮನೆ ಪ್ರತ್ಯೇಕತೆಯಲ್ಲಿದ್ದಾರೆ, 50 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 15 ಮಂದಿ ತೀವ್ರ ನಿಗಾ ಘಟಕದಲ್ಲಿ ದ್ದಾರೆ. ಶನಿವಾರ 60 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement